ಜಿಲ್ಲಾ ಮಟ್ಟದ ಉಡುಪಿ ಬಿಜೆಪಿ ಕಾರ್ಯಕರ್ತರ ಸಭೆ : ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಭಾಗಿ
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಜೂನ್ 22 ರಂದು ಉಡುಪಿಯ ಕಿದಿಯೂರು ಹೋಟೆಲ್ ನ ಶೇಷಶಯನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಮುಖ್ಯಮಂತ್ರಿ ಉಪಮುಖ್ಯಮಂತ್ರಿಗಳು ಪೊಲೀಸರ ಸಭೆ ಮಾಡಿದ್ದಾರೆ. ಪೊಲೀಸರ ಸಭೆಯಲ್ಲಿ ಕೇಸರೀಕರಣ ಬೇಡ ಹುಷಾರ್ ! ಎಂದಿದ್ದಾರೆ. ಇದರ ಅರ್ಥ ಏನು? ಹಿಂದುತ್ವದ ವಿರುದ್ದ ಕೆಲಸ ಮಾಡಿ ಎಂದು ಸೂಚನೆ ಕೊಡುತ್ತೀರಾ? ನಾನು ಕೂಡಾ ಗೃಹ ಸಚಿವನಾಗಿದ್ದೆ. ಮೊದಲ ಸಭೆಯಲ್ಲಿ ಪೊಲೀಸರಿಗೆ ಶಾಂತಿ ಸುವ್ಯವಸ್ಥಿತ ಕಾಪಾಡಿ ಅನ್ನುತ್ತೇವೆ. ಆದರೆ ಕಾಂಗ್ರೆಸ್ ಈ ಮೂಲಕ ಯಾವ ಸಮುದಾಯಕ್ಕೆ ಏನು ಮೆಸೇಜ್ ಕಲಿಸುತ್ತ ಇದೀರಿ? ಇದರ ಪರಿಣಾಮ ಇವತ್ತು ಬೇರೆ ಬೇರೆನೇ ಆಗುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಗುಡುಗಿದರು.
ಈ ವೇಳೆ ಕರ್ನಾಟಕ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ಕೇಶವ ಪ್ರಸಾದ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಶಾಸಕರಾದ ಯಶ್ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಬಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಮಾಜಿ ಶಾಸಕರಾದ ಕೆ. ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಉಪಸ್ಥಿತರಿದ್ದರು.