ನೈಋತ್ಯ ಶಿಕ್ಷಕರ ಕ್ಷೇತ್ರದ ಮತದಾನ : ದ.ಕ. ಉಡುಪಿ, ಚಿಕ್ಕಮಗಳೂರಿನಲ್ಲಿ ಯಶಸ್ವೀ ಕ್ಯಾಂಪೇನ್

ಕರ್ನಾಟಕ ವಿಧಾನ ಪರಿಷತ್ ನ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಇಂದು ನಡೆಯುತ್ತಿದೆ. ಖ್ಯಾತ ವೈದ್ಯರಾದ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಸ್ಪರ್ಧಿಸುತ್ತಿದ್ದು, ಉತ್ತಮ ಪ್ರಚಾರವನ್ನು ಮಾಡಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದಂತೆ ವಿವಿಧೆಡೆ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ, ಅಲ್ಲಿನ ಶಿಕ್ಷಕರನ್ನು ಭೇಟಿಯಾಗಿ ಅವರೊಂದಿಗೆ ಚರ್ಚಿಸಿ, ಶಿಕ್ಷಕರ‌ ಪ್ರಮುಖ ಸಮಸ್ಯೆಗಳನ್ನು ಕೇಳಿ, ಗೆದ್ದು ಬಂದರೆ, ಸಮಸ್ಯೆಗಳನ್ನು ಈಡೇರಿಸುವ ಭರವಸೆ ವ್ಯಕ್ತಪಡಿಸಿದ್ದಾರೆ.

ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರಿಗೆ ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್, ನಟ ಪ್ರಥಮ್‌ ಅವರು ಸ್ಟಾರ್ ಪ್ರಚಾರಕಾಗಿ ಸಾಥ್ ನೀಡಿದ್ದರು.

ಇಂದು ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ‌ ಮತದಾನ ನಡೆಯುತ್ತಿದ್ದು, ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಗೆಲುವಿನ ವಿಶ್ವಾಸದಲ್ಲಿದ್ದಾರೆ.

Related Posts

Leave a Reply

Your email address will not be published.