ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳಕ್ಕೆ ಭೇಟಿ, ಪೂಜೆ ಸಲ್ಲಿಕೆ
ಕರ್ನಾಟಕ ವಿಧಾನ ಪರಿಷತ್ ಚುನವಣೆಗೆ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಜೂನ್ 3ರಂದು ಚುನಾವಣೆ ನಡೆಯಲಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಸ್ಪರ್ಧಿಸಲಿದ್ದಾರೆ.
ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲಿರುವ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಿಯ ಆಶೀರ್ವಾದ ಪಡೆದರು. ನಂತರ ಶ್ರೀ ಹರಿ ನಾರಾಯಣ ಅಸ್ರಣ್ಣ ಅವರನ್ನು ಭೇಟಿ ಮಾಡಿ ಅವರಿಂದಲೂ ಆಶೀರ್ವಾದ ಪಡೆದುಕೊಂಡರು.