ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಹಾಗೂ ಪೊಲೀಸ್ ಇಲಾಖೆ, ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮವು ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಬೂಮರೆಡ್ಡಿ ಮಾತನಾಡಿ ‘ನಮ್ಮ ದೇಶ ಅತ್ಯಂತ ಹೆಚ್ಚು ಯುವಜನತೆಯನ್ನು ಹೊಂದಿದ್ದು, ಯುವಶಕ್ತಿಯನ್ನು ಸಮರ್ಥವಾಗಿ ಬಳಸಿಕೊಂಡರೆ ದೇಶದ ಅಭಿವೃದ್ಧಿ ಸಾಧ್ಯ. ಆ ನಿಟ್ಟಿನಲ್ಲಿ ವ್ಯಸನ ಮುಕ್ತ ಭಾರತ ಕಟ್ಟುವಲ್ಲಿ ಯುವಜನತೆ ಪಣತೊಡಬೇಕು ಎಂದರು. ಕಾರ್ಯಕ್ರಮದಲ್ಲಿ ಸುಳ್ಯದ ಪೊಲೀಸ್ ವೃತ ನಿರೀಕ್ಷಕ ತಿಮ್ಮಪ್ಪ ನಾಯಕ್, ಸುಳ್ಯ ಪೊಲೀಸ್ ಉಪನಿರೀಕ್ಷಕರಾದ ಸಂತೋಷ್ ಬಿ ಆರ್ ಹಾಗೂ ಸರಸ್ವತಿ, ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ, ಐಕ್ಯೂಎಸಿ ಸಂಚಾಲಕಿ ಡಾ. ಮಮತಾ ಕೆ ಮೊದಲಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿ ಅಭಿಷೇಕ್ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಮೇಘನಾ ಸ್ವಾಗತಿಸಿ, ತುಳಸಿ ವಂದಿಸಿ, ಸುಜನಾ ರೈ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ವಿದ್ಯಾರ್ಥಿಗಳು, ಬೋಧಕ- ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಸಂವಾದ ಕಾರ್ಯಕ್ರಮ ನಡೆಯಿತು