ಚುನಾವಣೆಗೆ ಮೂಡುಬಿದಿರೆ ಕ್ಷೇತ್ರದಲ್ಲಿ ಸಿದ್ಧತೆ ಪೂರ್ಣ: ಚುನಾವಣಾಧಿಕಾರಿ ಮಹೇಶ್ಚಂದ್ರ

ಮೂಡುಬಿದಿರೆ: ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಮೇ.10ರಂದು ನಡೆಯುವ ವಿಧಾನಸಭೆಗೆ ಸಕಲ ಸಿದ್ಧತೆಯನ್ನು ಮಾಡಲಾಗಿದೆ. ಕ್ಷೇತ್ರದಲ್ಲಿ ಒಟ್ಟು 221 ಮತಗಟ್ಟೆಗಳಲ್ಲಿ 103 ಮತಗಟ್ಟೆಗಳಿಗೆ ವೆಬ್‌ಕಾಸ್ಟ್ ಅಳವಡಿಸಲಾಗಿದೆ. ಚುನಾವಣಾ ಸಿಬ್ಬಂದಿಗಳಿಗೆ ಸಹಿತ 62 ವಾಹನಗಳನ್ನು ಸಜ್ಜುಗೊಳಿಸಲಾಗಿದೆ ಎಂದು ಚುನಾವಣಾಧಿಕಾರಿ ಮಹೇಶ್ಚಂದ್ರ ಹೇಳಿದರು.

ಶನಿವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಈ ಕ್ಷೇತ್ರದಲ್ಲಿ ಮತಗಟ್ಟೆ 166ರ ಪೆರ್ಮುದೆ ಅತೀ ಸೂಕ್ಷ್ಮ ಮತಗಟ್ಟೆಯಾಗಿದ್ದು, ಬಾಳ ಗ್ರಾಮದ ಮತಗಟ್ಟೆ ಸಂಖ್ಯೆ 176 ಹಾಗೂ 177 ಸೂಕ್ಷ್ಮ ಮತಗಟ್ಟೆಯಾಗಿದೆ. ಇಲ್ಲಿ ವಿಶೇಷ ನಿಗಾ ಇಡಲಾಗುವುದು. 80 ವರ್ಷಕ್ಕಿಂತ ಮೇಲ್ಪಟ್ಟ 1617 ಮತದಾರರಿದ್ದು, ಈ ಪೈಕಿ 1562 ಮತದಾರರು ಮನೆಯಿಂದಲೇ ಮತ ಚಲಾಯಿಸಿದ್ದಾರೆ. ಮತದಾನ ಮುಗಿದ ಬಳಿಕ ಮಹಾವೀರ ಕಾಲೇಜಿನಲ್ಲಿ ಇವಿಎಂ ಯಂತ್ರಗಳನ್ನು ಸಂಗ್ರಹಿಸಿ ಮತ ಎಣಿಕೆ ಕೇಂದ್ರವಾದ ಸುರತ್ಕಲ್ ಎನ್‌ಐಟಿಕೆಗೆ ರವಾನಿಸಲಾಗುವುದು. ಚುನಾವಣೆಯಂದು 144 ಸೆಕ್ಷನ್ ಜಾರಿಯಲ್ಲಿರುವುದರಿಂದ ಜನರು ಗುಂಪು ಗುಂಪಾಗಿಮತಗಟ್ಟೆಗೆ ತೆರಳಬಾರದು. ಮತದಾನದಂದು ಯಾವುದೇ ಅಭ್ಯರ್ಥಿಗಳು ವಾಹನಗಳಲ್ಲಿ ಮತದಾರರನ್ನು ಕರೆತರುವಂತಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಹಾಯಕ ಚುನಾವಣಾಧಿಕಾರಿ  ಸಚ್ಚಿದಾನಂದ ಸತ್ಯಪ್ಪ ಕುಚನೂರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.