ಕನ್ನಡದ ಖ್ಯಾತ ನಟ ಇನ್ನಿಲ್ಲ ..! !

ಬೆಂಗಳೂರು; ಸ್ಯಾಂಡಲ್ ವುಡ್ ಇದೀಗ ಮತ್ತೊಮ್ಮೆ ಆಘಾತ ಎದುರಾಗಿದೆ. 200 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಿರಿಯ ನಟ ಲಕ್ಷ್ಮಣ್ (74) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಲಕ್ಷ್ಮಣ್ ಭಾನುವಾರ ರಾತ್ರಿ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಇಂದು ಮುಂಜಾನೆ 3.30 ಸುಮಾರಿಗೆ ಅವರನ್ನು ನಾಗರಬಾವಿಯಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇಸಿಜಿ ಮಾಡಿ ಅವರನ್ನು ಮನೆಗೆ ಕರೆದುಕೊಂಡು ಬರಲಾಗಿತ್ತು. ಆ ಬಳಿಕ ಅವರಿಗೆ ಹೃದಯಾಘಾತವಾಗಿದೆ. ಇದೀಗ ಅವರ ಮನೆಯಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ.

Related Posts

Leave a Reply

Your email address will not be published.