ಫಾಝಿಲ್ ಸ್ಮರಣಾರ್ಥ ಸಾರ್ವಜನಿಕ ರಕ್ತದಾನ ಶಿಬಿರ

ಇತ್ತೀಚಿಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಫಾಝಿಲ್ ಮಂಗಳಪೇಟೆ ಸ್ಮರಣಾರ್ಥವಾಗಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯಿಂದ ಆ. 7 ರಂದು ಆದಿತ್ಯವಾರ ಜಿಲ್ಲೆಯ ವಿವಿಧೆಡೆ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಸ್ವತಃ ರಕ್ತದಾನಿಯಾಗಿದ್ದ ಮೃತ ಫಾಝಿಲ್ ಅವರು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ ಸಕ್ರಿಯ ಸದಸ್ಯನಾಗಿದ್ದುಕೊಂಡು ತುರ್ತು ಸಂದರ್ಭ ರಕ್ತ ಪೂರೈಕೆಯಲ್ಲಿ ಮೂಂಚೂಣಿಯಲ್ಲಿದ್ದರು. ಅವರ ಸ್ಮರಣಾರ್ಥವಾಗಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ 6ನೇ ವಾರ್ಷಿಕೋತ್ಸವದ ಪ್ರಯುಕ್ತ ದ.ಕ. ಜಿಲ್ಲೆಯ ಉಳ್ಳಾಲ, ಉಳಾಯಿಬೆಟ್ಟು, ಪುತ್ತೂರು ಹಾಗೂ ಬಂಟ್ವಾಳ ತಾಲೂಕಿನ ಅಮ್ಮುಂಜೆಯಲ್ಲಿ ಆ. 7 ರಂದು ಆದಿತ್ಯವಾರ ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 1:30 ರವರೆಗೆ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸಂಸ್ಥೆಯ ಸಲಹೆಗಾರ ಮುಸ್ತಫಾ ದೆಮ್ಮಲೆ ಮನವಿ ಮಾಡಿದ್ದಾರೆ.
