ಫಾಝಿಲ್ ಮನೆಗೆ ಎಸ್ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಭೇಟಿ

ಸುರತ್ಕಲ್ ನಲ್ಲಿ ಸಂಘಪರಿವಾರ ಬೆಂಬಲಿತ ದುಷ್ಕರ್ಮಿಗಳಿಂದ ಇತ್ತೀಚೆಗೆ ಬರ್ಬರವಾಗಿ ಹತ್ಯೆಗೀಡಾದ ಫಾಝಿಲ್ ಮನೆಗೆ ಎಸ್ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಭೇಟಿ ಕೊಟ್ಟು ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೊಲೆಗಡುಕರಿಗೆ ತಕ್ಕ ಶಿಕ್ಷೆ ಆಗಬೇಕು. ಇದಕ್ಕೆ ಬೇಕಾದ ಕಾನೂನು ಹೋರಾಟದಲ್ಲಿ ಪಕ್ಷ ಫಾಝಿಲ್ ಕುಟುಂಬದ ಜೊತೆ ನಿಲ್ಲಲಿದೆ ಎಂದರು. ಸಾಂತ್ವಾನ ಹೇಳುವುದರಲ್ಲಿಯೂ ಸರ್ಕಾರ ಅನುಸರಿಸಿದ ತಾರತಮ್ಯ ನೀತಿಯನ್ನು ಖಂಡಿಸಿದ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ಯೆಯಾದ ಮೂವರಿಗೂ ಸರ್ಕಾರದಿಂದ ಸಮಾನ ಪರಿಹಾರ ಕೊಡಬೇಕೆಂದು ಒತ್ತಾಯಿಸಿದರು. ಇದೇ ವೇಳೆ ಫಾಝಿಲ್ ಅವರ ಖಬರ್ ಸಂದರ್ಶನ ನಡೆಸಿದ ಅವರು ಮೃತರಿಗಾಗಿ ಪ್ರಾರ್ಥನೆ ಮಾಡಿದರು. ಈ ಸಂದರ್ಭದಲ್ಲಿ ಎಸ್ಡಿಪಿಐ ಜಿಲ್ಲಾಧ್ಯಕ್ಷರಾದ ಅಬೂಬಕ್ಕರ್ ಕುಳಾಯಿ, ಜಿಲ್ಲಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ,ಮೂಡಬಿದ್ರೆ ಕ್ಷೇತ್ರಾಧ್ಯಕ್ಷರಾದ ಆಸೀಫ್ ಕೋಟೆಬಾಗಿಲು, ಅಯ್ಯೂಬ್ ಸೂರಿಂಜೆ ಹಾಗೂ ಸ್ಥಳೀಯ ನಾಯಕರು ಕಾರ್ಯಕರ್ತರು ಜೊತೆಗಿದ್ದರು.

Related Posts

Leave a Reply

Your email address will not be published.