ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನಲ್ಲಿ : ಡಾ. ಎಂ.ಎಮ್ ಧಾವಲೆ ಸ್ಮರಣಾರ್ಥ ಉಪಾನ್ಯಾಸ

ದೇರಳಕಟ್ಟೆ: ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನಲ್ಲಿ ಡಾ.ಎಂ.ಎಲ್. ಧಾವಲೆ ಸ್ಮರಣಾರ್ಥ ಉಪನ್ಯಾಸ ಕಾರ್ಯಕ್ರಮ ನಡೆಯಿತು.ಮುಂಬಾಯಿ ಡಾ.ಎಂ.ಎಲ್. ಧವಲೇ ಮೆಮೋರಿಯಲ್ ಹೋಮಿಯೋಪಥಿ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಡಾ.ಬಿಪಿನ್ ಜೈನ್ ಒಂದು ದಿನದ ಉಪನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ವೈದ್ಯಕೀಯ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ನಮ್ಮ ದೇಶದ ಸಾಧನೆ ಮಹತ್ತರವಾದುದು. ಇಂದಿನ ಆಧುನಿಕತೆಯ ಕಾಲಘಟ್ಟದಲ್ಲಿ ವೈಜ್ಞಾನಿಕ ಹೋಮಿಯೋಪಥಿ ವೈದ್ಯಕೀಯ ವ್ಯವಸ್ಥೆಯು ಇಡೀ ವಿಶ್ವದಲ್ಲೇ ಪ್ರಮುಖ ಪಾತ್ರವಹಿಸುತ್ತಿದೆ ಎಂದು ಹೇಳಿದರು.

ಫಾದರ್ ಮುಲ್ಲರ್ ಚಾರಿಟೇಬಲ್ ಅಸೋಸಿಯೇಸನ್ ನ ನಿರ್ದೇಶಕರಾದ ಫಾ.ರಿಚಾರ್ಡ್ ಅಲೋಶಿಯಸ್ ಕುವೆಲ್ಲೋ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, 37 ವರ್ಷ ಗಳಿಂದ ಹೋಮಿಯೋಪಥಿ ವೈದ್ಯಕೀಯ ಶಿಕ್ಷಣದ ಮೂಲಕ ಫಾದರ್ ಮುಲ್ಲರ್ ಸಂಸ್ಥೆಯು ಸೇವೆ ಮಾಡುತ್ತಾ ಬಂದಿದೆ. ಸಂಸ್ಥೆಯ ಬೆಳವಣಿಗೆಯಲ್ಲಿ ಡಾ.ಎಂ.ಎಲ್ .ಧಾವ್ಲೆ ಅವರ ಕೊಡುಗೆ ಅಪಾರವಾದುದು. ಅವರ ನೆನಪಿನಲ್ಲಿ ಈ ಕಾರ್ಯಕ್ರಮ ನಡೆಯುತ್ತಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.ಇಂದಿನ ಆಧುನಿಕತೆಯಲ್ಲಿ ವೈದ್ಯಕೀಯ ಶಿಕ್ಷಣದಲ್ಲಿ ತಂತ್ರಜ್ಞಾನದೊಂದಿಗೆ ಸಂಶೋಧನೆಗಳಿಗೆ ಅವಕಾಶಗಳು ಹೆಚ್ಚಿವೆ. ಇಂತಹ ಅವಕಾಶಗಳನ್ನು ವಿದ್ಯಾರ್ಥಿಗಳು ಬಳಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.ಫಾ.ಮುಲ್ಲರ್ ಹೋಮಿಯೋಪಥಿ ಕಾಲೇಜಿನ ಆಡಳಿತ ನಿರ್ದೇಶಕ ಫಾ.ರೋಶನ್ ಕ್ರಾಸ್ತಾ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಮುಂಬಾಯಿ ಡಾ.ಎಂ.ಎಲ್. ಧವಲೇ ಮೆಮೋರಿಯಲ್ ಹೋಮಿಯೋಪಥಿ ಶಿಕ್ಷಣ ಸಂಸ್ಥೆಯ ಸಂಶೋಧನಾ ವಿಭಾಗದ ಮುಖ್ಯಸ್ಥರಾದ ಡಾ.ಪ್ರಶಾಂತ್ ತಂಬೊಳಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಡಾ.ವಿಲ್ಮಾ ಡಿಸೋಜಾ ಫಾ.ಮು.ಹೋಮಿಯೋಪಥಿ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರಭುಕಿರಣ್ , ಕಾರ್ಯಕ್ರಮದ ಕನ್ವೀನರ್ ಡಾ.ಜಾನ್ ಪೌಲ್ . ಡಾ.ಶ್ರೇಯಾಂಕ್ ಕೆ ಹಾಗೂ ಜೀನ್ ಜಾಯ್ ಮೊದಲಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಪ್ರಯುಕ್ತ ಆಯೋಜಿಸಲಾಗಿದ್ದ ಲೇಖನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಪುರಸ್ಕಾರದೊಂದಿಗೆ ಗೌರವಿಸಲಾಯಿತು. ಹಾಗೂ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

Related Posts

Leave a Reply

Your email address will not be published.