ಬೈಂದೂರು ಸುರ್ಕುಂದ ವಾರ್ಡ್‍ನಲ್ಲಿ ಬಿರುಸಿನ ಪ್ರಚಾರ
ಬೈಂದೂರು:ರಾಷ್ಟ್ರಭಕ್ತರ ಬಳಗದ ವತಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರದ ಸುರ್ಕುಂದ ವಾರ್ಡ್ ಬೂತ್ ನಂ.34 ರಲ್ಲಿ ನಿತ್ಯ ಮೊಗವೀರ ಅವರ ಸಾರಥ್ಯದಲ್ಲಿ ವೆಂಕಟೇಶ ಕಲ್ಮಕ್ಕಿ,ಪ್ರಶಾಂತ್ ಮೊಗವೀರ ಹಾಗೂ ಸ್ಥಳೀಯರ ಸಹಕಾರದಲ್ಲಿ ಮಾಜಿ ಮುಖ್ಯ ಮಂತ್ರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಪರವಾಗಿ ಮನೆ ಭೇಟಿ ಮಾಡಿ ಬಿರುಸಿನ ರೀತಿಯಲ್ಲಿ ಮತ ಪ್ರಚಾರವನ್ನು ಮಾಡಲಾಯಿತು.ಕಾರ್ಯಕರ್ತರು ಬಿರು ಬಿಸಿಲನ್ನು ಲೆಕ್ಕಿಸದೆ ಪ್ರಚಾರದ ಕಾರ್ಯದಲ್ಲಿ ತೊಡಗಿಕೊಂಡರು.ಕೇಸರಿ ಶಾಲನ್ನು ಧರಿಸಿ ಪುರುಷರ ಜೊತೆಯಲ್ಲಿ ಮಹಿಳೆಯರು ಮತ ಪ್ರಚಾರದಲ್ಲಿ ತೊಡಗಿಕೊಂಡಿರುವುದು ವಿಶೇಷವಾಗಿದೆ.