ದುಬೈ ರಸ್ತೆ ಅಪಘಾತಕ್ಕೆ ತಾ.ಪಂ ಮಾಜಿ ಉಪಾಧ್ಯಕ್ಷೆ ಏಕೈಕ ಪುತ್ರಿ ದಾರುಣ ಸಾವು
ಉಳ್ಳಾಲ : ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ.
ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿಯಾಗಿರುವ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರುಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು. 2019ರಲ್ಲಿ ದುಬಾಯಿಗೆ ತೆರಳಿ ಎಕ್ಸ್‍ಕ್ಯೂಜೆಟ್‍ನಲ್ಲಿ ಅಧಿಕಾರಿಯಾಗಿ ಕಳೆದ ಐದು ವರುಷಗಳಿಂದ ಕಾರ್ಯನಿರ್ವಹಿಸಿದ್ದರು. ಪ್ರತೀ ದಿನ ಕಂಪೆನಿಯ ಕ್ಯಾಬ್‍ನಲ್ಲಿ ಸಂಚರಿಸುತ್ತಿದ್ದ ವಿದಿಶಾ ಗುರುವಾರ ತಡವಾಯಿತು ಎಂದು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ ಗಂಭೀರ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರತಿಭಾನ್ವಿತರಾಗಿದ್ದ ವಿದಿಶಾ ವಿದ್ಯಾರ್ಥಿದೆಸೆಯಲ್ಲೇ ರೋಟರ್ಯಾಕ್ಟ್ ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು.
ಹೊಸ ಕಾರು ಖರೀದಿಸಿದ್ದರು : ದುಬಾೈಯಲ್ಲಿ ವಾಹನ ಚಾಲನಾ ಲೈಸೆನ್ಸ್ ಪಡೆದ ಬಳಿಕ ಕಳೆದ ಆರು ತಿಂಗಳ ಹಿಂದೆ ಹೊಸ ಕಾರು ಖರೀದಿಸಿದ್ದ ವಿದಿಶಾ ತಂದೆ, ತಾಯಿಯನ್ನು ದುಬಾಯಿಗೆ ಕರೆಸಿ ಕಾರಿನಲ್ಲಿ ಸುತ್ತಾಡಿಸಿದ್ದರು. ತಂದೆ ತಾಯಿ ಮಗಳ ಮದುವೆಯ ಸಿದ್ಧತೆ ನಡೆಸುತ್ತಿರುವಾಗಲೇ ಈ ದುರಂತ ನಡೆದಿದ