ಪುತ್ತೂರು: ಅಂದ್ರಟ್ಟ ಸೇತುವೆ ಕಾಮಗಾರಿಗೆ ಎರೆಡೆರಡು ಬಾರಿ ಶಿಲಾನ್ಯಾಸ
ಪುತ್ತೂರು: ಶಾಂತಿಗೋಡು ಮತ್ತು ನರಿಮೊಗರು ಗ್ರಾಮದ ಅಂದ್ರಟ್ಟದ ಸಂಪರ್ಕ ಸೇತುವೆಗೆ 2023 ರ ಮಾರ್ಚ್ 19ರಂದು ಆಗಿನ ಶಾಸಕ ಸಂಜೀವ ಮಠಂದೂರು ಅವರು ಶಿಲಾನ್ಯಾಸ ನೆರವೇರಿಸಿದ್ದರು. ಇದೀಗ ಅದೇ ಕಾಮಗಾರಿಗೆ ಈಗಿನ ಶಾಸಕ ಅಶೋಕ್ ಕುಮಾರ್ ರೈ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ ಎಂದು ಶಾಂತಿಗೋಡು ಶಕ್ತಿ ಕೇಂದ್ರದ ಅಧ್ಯಕ್ಷ ಶ್ಯಾಂ ಭಟ್ ಮತ್ತು ಚಿಕ್ಕಮುಡ್ನೂರು ಶಕ್ತಿ ಕೇಂದ್ರದ ಅಧ್ಯಕ್ಷ ನಾಗೇಶ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದ್ರಟ್ಟದಲ್ಲಿ 2ನೇ ಬಾರಿಗೆ ಶಿಲಾನ್ಯಾಸ ನೆರವೇರಿಸುವ ಅಗತ್ಯ ಶಾಸಕರಿಗೆ ಏಕೆ ಬಂತು. ಅಂದ್ರಟ್ಟ ಸೇತುವೆ ನಿರ್ಮಾಣದ ಹಿಂದೆ ನಾವು ಸಾಕಷ್ಟು ಕೆಲಸ ನಿರ್ವಹಿಸಿದ್ದೇವೆ. ಮೂರು ಮನೆಗಳವರನ್ನು ಒಪ್ಪಿಸಿ, ಸೇತುವೆ ನಿರ್ಮಾಣಕ್ಕೆ ಅಗತ್ಯ ಜಾಗವನ್ನು ತೆಗೆಸಿಕೊಟ್ಟಿದ್ದೇವೆ. ಆಗಿನ ಶಾಸಕ ಸಂಜೀವ ಮಠಂದೂರು ಅವರು ಸಾಕಷ್ಟು ಶ್ರಮ ಪಟ್ಟಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ನರಿಮೊಗರು ಗ್ರಾಪಂ ಅಧ್ಯಕ್ಷೆ ಹರಿಣಿ, ಸದಸ್ಯ ನವೀನ್ ರೈ ಶಿಬರ, ಬನ್ನೂರು ಗ್ರಾಪಂ ಸದಸ್ಯ ರಾಘವೇಂದ್ರ ಉಪಸ್ಥಿತರಿದ್ದರು.