ಮೂಡುಬಿದಿರೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ
ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ, ಯುವವಾಹಿನಿ (ರಿ) ಮೂಡುಬಿದಿರೆ ಘಟಕ, ಮಂಗಳೂರಿನ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ನೇತ್ರಾ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ( ಅಂದತ್ವ ವಿಭಾಗ) ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ವಿದ್ಯಾಗಿರಿ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ ಆವರಣದಲ್ಲಿ ನಡೆಯಿತು.
ಯುವ ವಾಹಿನಿ (ರಿ) ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ ಪೂಜಾರಿ ಇವರು ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ್ ಆಳ್ವ ವಹಿಸಿದ್ದರು.
ವೇದಿಕೆಯಲ್ಲಿ ಯುವ ವಾಹಿನಿ (ರಿ) ಮೂಡಬಿದರಿ ಘಟಕದ ಅಧ್ಯಕ್ಷ ಶಂಕರ್ ಎ.ಕೋಟ್ಯಾನ್, ಡಾ. ಮಂಜುನಾಥ, ಡಾ. ಹನಾ ಶೆಟ್ಟಿ. ಸ್ತ್ರೀರೋಗ ತಜ್ಞರು ಆಳ್ವಾಸ್ ಹೆಲ್ತ್ ಸೆಂಟರ್, ಪ್ರಸಾದ್ ನೇತ್ರಾಲಯದ ವೈದ್ಯರಾದ ಡಾ. ಶೀತಲ್, ಜಗದೀಶ್ ಚಂದ್ರ ಡಿ.ಕೆ ಪ್ರಧಾನ ಕಾರ್ಯದರ್ಶಿಗಳು ಯುವ ವಾಹಿನಿ ಕೇಂದ್ರ ಸಮಿತಿ ಹಾಗೂ ಇತರರು ಉಪಸ್ಥಿತರಿದ್ದರು.
ಈ ಉಚಿತ ಶಿಬಿರದಲ್ಲಿ ಒಟ್ಟು 179 ಶಿಬಿರಾರ್ಥಿಗಳು ಭಾಗವಹಿಸಿ 43 ಮಂದಿ ಶಿಬಿರಾರ್ಥಿಗಳಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಪ್ರಸಾದ್ ನೇತ್ರಾಲಯ ಆಸ್ಪತ್ರೆಗೆ ಶಿಫಾರಸು ಮಾಡಲಾಯಿತು. ಅಗತ್ಯವುಳ್ಳ 97 ಮಂದಿಗೆ ಉಚಿತ ಕನ್ನಡಕ ನೀಡಲಾಯಿತು. ಹಾಗೂ ವಿಶೇಷವಾಗಿ ಈ ಶಿಬಿರದಲ್ಲಿ ಐದು ಮಂದಿ ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ಸದಸ್ಯರು ನೇತ್ರದಾನ ಪತ್ರಕ್ಕೆ ಸಹಿ ಮಾಡಿ ಎಲ್ಲರ ಪ್ರಶಂಸೆಗೆ ಪಾತ್ರರಾದರು.