ಸುಳ್ಯ : ಹಿರಿಯ ಕಾರ್ಯಕರ್ತರ ಭೇಟಿ ಮಾಡಿದ ಜಿ.ಕೃಷ್ಣಪ್ಪ

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ಕ್ಷೇತ್ರದಾದ್ಯಂತ ಮಿಂಚಿನ ಸಂಚಲನ ಮೂಡಿಸಿದ್ದಾರೆ.ಕೃಷ್ಣಪ್ಪ ಅವರು ಸುಳ್ಯದ ವಿವಿಧ ಬೂತ್ , ಬ್ಲಾಕ್ ಗಳ ಹಿರಿಯ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿದರು.ಕುಟ್ರಾಪ್ಪಾಡಿಯಲ್ಲಿ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ಸುಬ್ರಾಯ ಹೆಬ್ಬಾರ್ ಅವರನ್ನು ಭೇಟಿ ಮಾಡಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಆನಂದ ಪೂಜಾರಿ ಅವರನ್ನು ಅವರ ಮನೆಯಲ್ಲಿ ಭೇಟಿಯಾದರು.ಗ್ರಾಮ ಕುಂಜ ಗ್ರಾಮಕ್ಕೆ ಭೇಟಿ ನೀಡಿದ ಜಿ.ಕೃಷ್ಣಪ್ಪ ಅವರನ್ನು ಪಕ್ಷದ ಕಾರ್ಯಕರ್ತರು‌ ಅಭಿನಂದಿಸಿದರು.ಕ್ಷೇತ್ರದ‌ ವಿವಿಧ ದೇವಸ್ಥಾನ, ದೈವಸ್ಥಾನ , ಆರಾಧನಾ ಕೇಂದ್ರಗಳಿಗೆ ಜಿ.ಕೃಷ್ಣಪ್ಪ ಅವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

Related Posts

Leave a Reply

Your email address will not be published.