ಗಂಗೊಳ್ಳಿ: ಮೀನುಗಾರಿಕಾ ಬೋಟ್‍ಗೆ ಅಗ್ನಿ ಅವಘಡ: ಸರ್ಕಾರಕ್ಕೆ ವರದಿ ಸಲ್ಲಿಸಿ ಪರಿಹಾರ ಬಿಡುಗಡೆಗೆ ಪ್ರಯತ್ನ: ಸಂಸದ ಬಿ. ವೈ ರಾಘವೇಂದ್ರ

ಗಂಗೊಳ್ಳಿಯ ಮ್ಯಾಂಗನೀಸ್ ವಾರ್ಫ್ ಪ್ರದೇಶದಲ್ಲಿ ನಡೆದ ಅಗ್ನಿ ಅವಘಡ ಪ್ರದೇಶಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮ್ಯಾಂಗನೀಸ್ ವಾರ್ಫ್ ಪ್ರದೇಶದಲ್ಲಿ ನಿಲ್ಲಿಸಿದ್ದ ಸುಮಾರು 8 ಮೀನುಗಾರಿಕೆ ಬೋಟುಗಳು ಹಾಗೂ ಒಂದು ದೋಣಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾಗಿ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು ಘಟನೆ ಬಗ್ಗೆ ಸಂಬಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಮೀನುಗಾರ ಮುಖಂಡರೊಂದಿಗೆ ಬಿವೈ. ರಾಘವೇಂದ್ರ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಮೀನುಗಾರರು ಪುನಃ ತಮ್ಮ ಬದುಕನ್ನು ಕಟ್ಟಿಕೊಳ್ಳುವ ಉದ್ದೇಶದಿಂದ ಆದಷ್ಟೂ ಶೀಘ್ರ ಸರಕಾರಕ್ಕೆ ವರದಿ ಸಲ್ಲಿಸಿ ಪರಿಹಾರ ಬಿಡುಗಡೆಗೆ ಪ್ರಯತ್ನಿಸುವಂತೆ ಮನವಿ ಮಾಡಿದರು.

ಈ ಬಗ್ಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರೊಂದಿಗೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಇಲ್ಲಿನ ಘಟನೆ ಬಗ್ಗೆ ತಿಳಿಸಿ ಪ್ರಕರಣದ ಗಂಭೀರತೆ ಬಗ್ಗೆ ಮನವರಿಕೆ ಮಾಡಲಾಗಿದೆ. ಆದ್ದರಿಂದ ಮೀನುಗಾರರು ಮತ್ತೊಮ್ಮೆ ಬದುಕನ್ನು ಕಟ್ಟಿಕೊಳ್ಳಲು ಸರಕಾರ ಸಹಾಯ ಸಹಕಾರ ನೀಡಬೇಕು. ಮುಖ್ಯಮಂತ್ರಿಗಳು ವಿಶೇಷ ಪರಿಹಾರ ರೂಪದಲ್ಲಿ 10 ಕೋಟಿ ರೂ. ಬಿಡುಗಡೆ ಮಾಡಬೇಕೆಂದು ಮನವಿ ಮಾಡಲಾಗಿದೆ ಎಂದರು

.

ಬೈಂದೂರು ಶಾಸಕ ಗುರುರಾಜ್ ಬಿಜೆಪಿ ಜಿಲ್ಲಾಧ್ಯಕ್ಷ ಗಂಟೆಹೊಳೆ, ಬಿಜೆಪಿ ಕುಯಿಲಾಡಿ ಸುರೇಶ ನಾಯಕ್, ಪ್ರದಾನ ಕಾರ್ಯದರ್ಶಿ ಸದಾನಂದ ಉಪ್ಪಿನ ಕುದ್ರು, ಉಪಾಧ್ಯಕ್ಷ ಆನಂದ ಖಾರ್ವಿ, ಮಂಡಲದ ಅಧ್ಯಕ್ಷ ದೀಪಕ್ ಕುಮಾರ ಶೆಟ್ಟಿ, ವಿನೋದ ಭಂಡಾರಿ, ಪ್ರಿಯದರ್ಶಿನಿ ದೇವಾಡಿಗ, ಬಿ.ಎಸ್.ಸುರೇಶ ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಶರತ್ ಕುಮಾರ್ ಶೆಟ್ಟಿ, ಸುರೇಂದ್ರ ಖಾರ್ವಿ, ನಾಗರಾಜ ಶೆಟ್ಟಿ ನಾರ್ಕಳಿ,-ಗಂಗೊಳ್ಳಿ ಗ್ರಾ.ಪಂ. ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ. ಪೂಜಾರಿ, ಹರೀಶ ಮೇಸ್ತ ಊರಿನ ಗ್ರಾಮಸ್ಥರು ಕಾರ್ಯಕರ್ತರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.