ಪುತ್ತೂರಿಗೆ ತೆರಳಿದ ರಾಜ್ಯಪಾಲರು
ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪುತ್ತೂರಿನ ವಿವೇಕಾನಂದ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಸ್ವಾಯತ್ತ ಕಾಲೇಜನ್ನು ಉದ್ಘಾಟಿಸಲು ಆ.30ರ ಮಂಗಳವಾರ ಬೆಳಿಗ್ಗೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಪೋಲಿಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ವಾಗತಿಸಿ, ಬರಮಾಡಿಕೊಂಡರು.
ರಾಜ್ಯಪಾಲರು ಪುತ್ತೂರಿನ ವಿವೇಕಾನಂದ ಕಾಲೇಜಿಗೆ ತೆರಳಿದರು.