ಜುಲೈ 24ರಂದು ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ

ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ – ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಸಹಭಾಗಿತ್ವ: ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ,ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮ ಜುಲೈ 24ರಂದು ಮಾಧವ ಮಂಗಲ ಸಭಾಭವನದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಂಕೀರ್ಣದಲ್ಲಿ ನಡೆಯಲಿದೆ ಎಂದು ಜಿಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆಯ ಸಂಚಾಲಕ ಆರ್ ವಿವೇಕಾನಂದ ಶೆಣೈ ತಿಳಿಸಿದರು.
ಅವರು ಕಾಪುವಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕಾರ್ಯಕ್ರಮವನ್ನು ಸುಪ್ರೀಂ ಕೋರ್ಟ್ ವಕೀಲರಾದ ರವಿಚಂದ್ರ ಕಿಣಿ ಉದ್ಘಾಟಿಸಲಿದ್ದು, ಬೆಂಗಳೂರಿನ ಸೆಂಚುರಿ ರಿಯಲ್ ಎಸ್ಟೇಟ್ ಹೋಲ್ಡಿಂಗ್ಸ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇದರ ಆಡಳಿತ ನಿರ್ದೆಶಕ ಪಿ ರವೀಂದ್ರ ದಯಾನಂದ ಪೈ ದಿಕ್ಸೂಚಿ ಭಾಷಣ ಮಾಡಲಿದ್ದು ,ಅನಂತ ವೈದಿಕ ಕೇಂದ್ರ ಉಡುಪಿಯ ವೇದಮೂರ್ತಿ ಚಿಂಪಿ ರಾಮಚಂದ್ರ ಅನಂತ ಭಟ್ ಅಧ್ಯಕ್ಷತೆ ವಹಸಲಿದ್ದಾರೆ,ಮುಖ್ಯ ಅತಿಥಿಗಳಾಗಿ ಗಣೇಶ್ ಬೀಡಿ ಪಾಲುದಾರ ಗೋವಿಂದ ಜಗನ್ನಾಥ ಶೆಣೈ ,ಸಿಎ ಗೋಕುಲ್ ದಾಸ್ ಪೈ,ರತ್ನಾಕರ ಕಾಮತ್ ,ಪಿ ರಾಮಚಂದ್ರ ಶೆಣೈ ಭಾಗವಹಿಸಲಿದ್ದಾರೆಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಶೈಕ್ಷಣಿಕ ಕಾರ್ಯಗಾರ ಹಾಗೂ ಭಾರತೀಯ ಸೇನೆಯಲ್ಲಿನ ಯುವ ಜನರಿಗೆ ಲಭ್ಯವಿರುವ ಅವಕಾಶಗಳು ಹಾಗೂ ಸವಾಲುಗಳು ಇದರ ಬಗ್ಗೆ ಶೈಕ್ಷಣಿಕ ಕಾರ್ಯಗಾರ ನಡೆಯಲಿದೆ ಅದರ ಜತೆಗೆ ಲೆಫ್ಟಿನೆಂಟ್ ಕರ್ನಲ್ ಅಜಿತ್ ವಿ ಭಂಡಾರ್ ಕಾರ್ ಅವರ ಜೀವನ ಸಾಧನೆಯ ಸಾಕ್ಷ್ಯ ಚಿತ್ರ ಮತ್ತು ಉಪನ್ಯಾಸ ಕಾರ್ಯಕ್ರಮ ಜರಗಲಿದೆ.
ಅದರ ಜತೆಗೆ ಎಸ್ ಎಸ್ ಎಲ್ ಸಿ ,ಪಿಯುಸಿ, ಸಿಇಟಿ,ನೀಟ್ ಮಾಡಲಾದ ಉನ್ನತ ವ್ಯಾಸಂಗದ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ಜಿಎಸ್ಬಿ ಸಮಾಜದ ವಿದ್ಯಾರ್ಥಿಗಳಿಗೆ ಅಭಿನಂದನೆ ನಡೆಯಲಿದ್ದು ಮತ್ತು ವಿದ್ಯಾಪೋಷಕ ನಿಧಿಯಿಂದ500 ವಿದ್ಯಾರ್ಥಿಗಳಿಗೆ ಒಟ್ಟು ೭೦ ಲಕ್ಷದ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮ ಇದಾಗಲಿದೆ ಎಂದು ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆಯ ಸಂಚಾಲಕ ಆರ್ ವಿವೇಕಾನಂದ ಶೆಣೈ, ಅಧ್ಯಕ್ಷ ಜಿ ಸತೀಶ್ ಹೆಗ್ಡೆ,ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್, ಸಿ ಎ ಗೋಪಾಲಕೃಷ್ಣ ಭಟ್ ,ವಿದ್ಯಾಪೋಷಕ್ ಸ್ಕಾಲರ್ ಶಿಪ್ ಫಂಡ್ ನ ಅಧ್ಯಕ್ಷ ಎಸ್ ಎಸ್ ನಾಯಕ್,ಸಂಯೋಜಕ ವಿಜಯ್ ಕುಮಾರ್ ಶೆಣೈ , ಹರೀಶ್ ನಾಯಕ್ ಕಾಪು ಉಪಸ್ಥಿತರಿದ್ದರು.