ಮಂಗಳೂರು : ವಿಚಾರಣೆಗೆ ಹಾಜರಾದ ನಟಿ ಅನುಷ್ಕಾ ಶೆಟ್ಟಿ ಸೋದರ ಗುಣರಂಜನ್

ಕೊಲೆಗೆ ಸ್ಕೆಚ್ ಹಾಕಿದ್ದಾರೆಂದು ಸುದ್ದಿಯಾಗಿದ್ದ ಬೆಂಗಳೂರಿನ ಉದ್ಯಮಿ, ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸೋದರ ಗುಣರಂಜನ್ ಶೆಟ್ಟಿ ಅವರನ್ನು ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಕರೆಸಿ ವಿಚಾರಣೆ ನಡೆಸಲಾಗಿದೆ.

ಕೊಲೆಗೆ ಸ್ಕೆಚ್ ವಿಚಾರದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ಗೃಹ ಇಲಾಖೆಯಿಂದ ಹೊಣೆ ನೀಡಲಾಗಿದೆ. ಹೀಗಾಗಿ ಮಂಗಳೂರು ಕಮಿಷನರ್ ಕಚೇರಿಗೆ ಗುಣರಂಜನ್ ಶೆಟ್ಟಿ ಅವರನ್ನು ಕರೆಸಿ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮಾಹಿತಿ ಸಂಗ್ರಹಿಸಿದ್ದಾರೆ.

ವಿಚಾರಣೆ ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದ ಗುಣರಂಜನ್ ಶೆಟ್ಟಿ, ನನಗೆ ಬಂದಿರುವ ರಿಲೈಬಲ್ ಸೋರ್ಸ್ ಪ್ರಕಾರ ಗೃಹ ಇಲಾಖೆಗೆ ಮನವಿಯನ್ನು ಕೊಟ್ಟಿದ್ದೆ. ಸಾರ್ವಜನಿಕ ಜೀವನದಲ್ಲಿ ಇರೋದ್ರಿಂದ ಹಲವಾರು ಜನರ ಜೊತೆ ವ್ಯವಹಾರ ಇದೆ, ನಿಷ್ಠುರ ಇದ್ದವರು ಕೂಡ ಇದ್ದಾರೆ. ಮಂಗಳೂರು ಪೊಲೀಸರು ಮಾಹಿತಿ ಸಂಗ್ರಹಕ್ಕೆ ಬರಹೇಳಿದ್ದರು. ಪೊಲೀಸರಿಗೆ, ನನಗೇನು ಗೊತ್ತಿದೆ ಆ ಮಾಹಿತಿಗಳನ್ನು ಕೊಟ್ಟಿದ್ದೇನೆ ಎಂದು ಹೇಳಿದರು.

Related Posts

Leave a Reply

Your email address will not be published.