ಕಾಪು ಪುರಸಭೆ ವ್ಯಾಪ್ತಿಯ 15 ಲಕ್ಷ ರೂಪಾಯಿ ಅನುದಾನದ ರಸ್ತೆ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ
ಕಾಪು ಪುರಸಭಾ ವ್ಯಾಪ್ತಿಯ ಕಲ್ಯಾ ವಾರ್ಡಿನ ಮಾತಾ ರೆಸಿಡೆನ್ಸಿ ಬಳಿಯ ಅಲ್ಪಸಂಖ್ಯಾತರ ಕಾಲೋನಿ ರಸ್ತೆ ಅಭಿವೃದ್ಧಿಗೆ 15 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 26-01-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿರಣ್ ಆಳ್ವ, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನೀಲಕಂಠ ಮೇಸ್ತಾ, ಪುರಸಭೆಯ ಸದಸ್ಯರಾದ ಲತಾ ದೇವಾಡಿಗ, ಸುರೇಶ್ ದೇವಾಡಿಗ, ಅನಿಲ್ ಕುಮಾರ್, ಮೋಹಿನಿ ಶೆಟ್ಟಿ, ರತ್ನಾಕರ್ ಶೆಟ್ಟಿ, ಶೈಲೇಶ್ ಅಮೀನ್, ಸರಿತಾ, ಉಮೇಶ್ ಕರ್ಕೇರ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.


















