2 ಕೋಟಿ ರೂಪಾಯಿ ವೆಚ್ಚದ ಸಮುದ್ರ ಕೊರೆತ ದೀರ್ಘಕಾಲಿಕ ಪ್ರತಿಬಂಧಕ ಸಂರಕ್ಷಣಾ ಕಾಮಗಾರಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ
ಪಡುಬಿದ್ರಿ: ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಬಿದ್ರಿ ಬೀಜ್ ಬಳಿ ಸಮುದ್ರ ಕೊರೆತ ದೀರ್ಘಕಾಲಿಕ ಪ್ರತಿಬಂಧಕ ಸಂರಕ್ಷಣಾ ಕಾಮಗಾರಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 2 ಕೋಟಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಇಂದು ದಿನಾಂಕ 26-01-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ಪೂಜಾರಿ, ಉಪಾಧ್ಯಕ್ಷರಾದ ಹೇಮಚಂದ್ರ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ನೀತಾ ಗುರುರಾಜ್,ಮುಖಂಡರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಎಲ್ಲದಡಿ, ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರಾದ ಶೋಭಾ, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.


















