ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಕಿಡಿ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧದ ಕುರಿತು ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಕಿಡಿಕಾರಿದರು. ಅವರು ವಿ4 ನ್ಯೂಸ್ ನೊಂದಿಗೆ ಮಾತನಾಡಿ, ಬಜರಂಗದಳ ಸಂಘಟನೆಯ ಮುಖಾಂತರ ಅಕ್ರಮ ದನ ಸಾಗಾಟ ಹಾಗೂ ಲವ್ ಜಿಹಾದ್ ವಿರುದ್ಧ ಹೋರಾಟ ಮಾಡಲಾಗುತ್ತಿದೆ. . ಇಂತಹ ಸಂಘಟನೆಯನ್ನು ನಿಷೇಧಕ್ಕೆ ಮುಂದಾಗುತ್ತಿರುವ ಸರಿಯಲ್ಲ.ಇದು ಕಾಂಗ್ರೆಸ್ ಅವನತಿ ಹೋಗುತ್ತದೆ ಎಂಬುದಕ್ಕೆ ಇದುವೇ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.ಇನ್ನು
ಕಾಪು ವಿಧಾನ ಸಭಾ ಕ್ಷೇತ್ರದಲ್ಲಿ ಉತ್ತಮ ವಾತಾವರಣವಿದೆ. ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಎಲ್ಲಾ ಕಡೆಯೂ ಉತ್ತಮ ವಾತಾವರಣ ಇದೆ ಎಂದು ಅವರು ಹೇಳಿದರು.