ಗುರುಪುರ : ಗ್ರಾಮ ಸಭೆ ನಡೆಸದಂತೆ ಗ್ರಾಮಸ್ಥರಿಂದ ಪ್ರತಿಭಟನೆ

ಕಳೆದು ಮೂರು ವರ್ಷಗಳ ಹಿಂದೆ ಗುರುಪುರ ಬಂಗ್ಲಗುಡ್ಡೆಯಲ್ಲಿ ಗುಡ್ಡ ಕುಸಿದು ಮನೆ ಕಳೆದುಕೊಂಡಿದ್ದ ಗ್ರಾಮಸ್ಥರು ಇಂದು ಗುರುಪುರ ಗ್ರಾಮಸಭೆ ನಡೆಸದಂತೆ ಪ್ರತಿಭಟನೆ ನಡೆಸಿದ್ದಾರೆ. ಗುಡ್ಡ ಕುಸಿತದಿಂದ 11 ಕುಟುಂಬಗಳು ಮನೆ ಕಳೆದುಕೊಂಡಿದ್ದಾರೆ. ಪರಿಹಾರ ಒದಗಿಸಬೇಕು ಎಂದು ಸಂತ್ರಸ್ತ ಕುಟುಂಬದವರು ಪ್ರತಿಭಟನೆ ನಡೆಸಿದ್ದಾರೆ. ಪರಿಹಾರ ಒದಗಿಸುವ ದಿನಾಂಕ ಮತ್ತು ಎಲ್ಲಾ ಅಧಿಕಾರಿಗಳು ಬಂದರೆ ಮಾತ್ರ ಸಭೆ ನಡೆಸಬೇಕೆಂದು ಒತ್ತಾಯಿಸಿದರು. ಇಂದು ಸಭೆಗೆ 28 ಅಧಿಕಾರಿಗಳ ಪೈಕಿ ಎಂಟು ಅಧಿಕಾರಿಗಳು ಮಾತ್ರ ಸಭೆಗೆ ಹಾಜರಾಗಿದ್ದರು, ಗೈರಾದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
