ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದ ನಿಧನ – Guruvappa Bayar

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಗುರುವಪ್ಪ ಬಾಯಾರು ಯಕ್ಷಗಾನ(Yakshagana) ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ನಿಧನರಾಗಿದ್ದಾರೆ.
ಕಟೀಲಿನ ಕ್ಷೇತ್ರದ ಸರಸ್ವತೀ ಸದನದಲ್ಲಿ ಗುರುವಾರ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಈ ಸಂದರ್ಭ ಶಿಶುಪಾಲನ ಪಾತ್ರಧಾರಿಯಾಗಿದ್ದ ಗುರುವಪ್ಪ ಬಾಯರು(Guruvappa Bayaru) ರಂಗಸ್ಥಳದಲ್ಲೇ ಇದ್ದರು. ಇನ್ನೊಂದು ಪಾತ್ರಧಾರಿ ಕುಣಿಯುತ್ತಿದ್ದಾಗ ಅಲ್ಲೇ ಇದ್ದ ಗುರುವಪ್ಪ ಬಾಯಾರು ಅವರಿಗೆ ಹೃದಯಾಘಾತವಾಗಿ ರಂಗಸ್ಥಳದಿಂದ ಕೆಳಗೆ ಕುಸಿದು ಬಿದ್ದಿದ್ದಾರೆ.

ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಅಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ʼತ್ರಿಜನ್ಮ ಮೋಕ್ಷʼ ಯಕ್ಷಗಾನ ಪ್ರದರ್ಶನದಲ್ಲಿ ಶಿಶುಪಾಲನ ಪಾತ್ರ ನಿರ್ವಹಣೆ ಮಾಡುತ್ತಿದ್ದ ಗುರುವಪ್ಪ ಬಾಯಾರು ರಂಗದಲ್ಲೇ ಮೋಕ್ಷ ಪಡೆದಿದ್ದಾರೆ.
