ಸ್ವಾಮೀಜಿಗಳಿಂದ ಅನಾಗರಿಕ ವರ್ತನೆ ಸರಿಯಲ್ಲ, ಹೆಚ್.ಡಿ. ಕುಮಾರಸ್ವಾಮಿ ಆರೋಪ

ಹತ್ಯೆ ಮಾಡಿದವರ ತಲೆ ಕಡಿಯುತ್ತೇವೆ ಎಂಬ ಹೇಳಿ ನೀಡಿರುವ ಕಾಳಿ ಸ್ವಾಮಿ ವರ್ತನೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಅವರು ಪುತ್ತೂರು ನೆಹರೂನಗರದ ಮಾಸ್ಟರ್ ಪ್ಲಾನರಿಗೆ ಭೇಟಿ ನೀಡಿದ ಸಂದರ್ಭ ಮಾಧ್ಯಮಂದೊಂದಿಗೆ ಮಾತನಾಡಿದರು. ಇಂತಹ ಹೇಳಿಕೆ ನೀಡುವುದು ಸ್ವಾಮೀಜಿಗಳ ಲಕ್ಷಣವಲ್ಲ. ಸ್ವಾಮೀಜಿಗಳು ಅನಾಗರಿಕರಂತೆ ವರ್ತಿಸುತ್ತಿದ್ದಾರೆ. ಸಮಾಜದ ಕಲುಷಿತ ವಾತಾವರಣಕ್ಕೆ ಕಾರಣಕರ್ತರಾಗಿದ್ದಾರೆ ಎಂದು ತಿಳಿಸಿದರು. ಈಗಾಗಲೇ ಜಿಲ್ಲೆಯಲ್ಲಿ ಹತ್ಯೆಗೀಡಾದ ಅಮಾಯಕರ ಮನೆಗಳಿಗೆ ಭೇಟಿ ನೀಡಿ ಅವರ ಕುಟುಂಬದವರಿಗೆ ಸ್ವಾಂತನ ಹೇಳಿ, ಕುಟುಂಬವರಿಗೆ ಧೈರ್ಯ ತುಂಬಿದರು. ಬಲಿಯಾದ ಅಮಾಯಕರ ಘಟನೆಗೆ ಕಾರಣವೇನು ಎಂಬುದರ ಕುರಿತು ಕೂಲಂಕುಷ ತನಿಖೆ ಮಾಡಬೇಕು. ನಿಜವಾದ ಆರೋಪಿಗಳನ್ನು ಪತ್ತೆ ಹಚ್ಚಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮಾಹಿತಿ ಸಂಗ್ರಹಿಸಿ ಸರಕಾರಕ್ಕೆ ಒತ್ತಡ ತರಲಾಗುವುದು ಎಂದರು.
ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್, ಭೋಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ, ಮುಖಂಡರಾದ ಎಂ.,ಬಿ.ಸದಾಶಿವ, ಮಹಮ್ಮದ್ ಕುಂಞ ವಿಟ್ಲ, ದಯಾಕರ ಆಳ್ವ, ಜೆಡಿಎಸ್ ತಾಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ, ರತ್ನಾಕರ ಸುವರ್ಣ, ಪ್ರವೀಣ್‍ಚಂದ್ರ ಜೈನ್, ಇಬ್ರಾಹಿಂ ಗೋಳಿಕಟ್ಟೆ, ಫೈಝಲ್ ರಹಿಮಾನ್, ಅಕ್ಷಿತ್, ಮಹಮ್ಮದ್, ಬಿಲಾಲ್, ಜೆಡಿಎಸ್ ಜಿಲ್ಲಾ ಮಹಿಳಾ ಅಧ್ಯಕ್ಷೆ ಸುಮತಿ, ಮಾಸ್ಟರ್ ಪ್ಲಾನರಿ ಮಾಲಕ ಎಸ್.ಕೆ.ಆನಂದ್ ಕುಮಾರಸ್ವಾಮಿ, ಮಾಜಿ ವಿಧಾನಪರಿಷತ್ ಸದಸ್ಯ ಭೋಜೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರನ್ನು ಶಾಲು ಹೊಸಿದಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಎಸ್.ಕೆ.ಆನಂದ್ ಅವರ ಮನೆಯವರು, ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು