ಬಂಟ್ವಾಳ : ಯಶಸ್ವಿಯಾಗಿ ನಡೆದ ಮಹಾ ಸಂಪರ್ಕ ಅಭಿಯಾನ
ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಈ ದಿನ ಪಕ್ಷದ ಸೂಚನೆಯನ್ವಯ 59 ಗ್ರಾಮದ 249 ಬೂತುಗಳಲ್ಲಿ ಎಲ್ಲಾ ಮನೆ ಮನೆ ಸಂಪರ್ಕ ಮಾಡುವ “ಮಹಾ ಸಂಪರ್ಕ ಅಭಿಯಾನ ” ವು ಅತ್ಯಂತ ಯಶಸ್ವಿ ಆಗಿದ್ದು ಇದಕ್ಕಾಗಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಕ್ಷೇತ್ರ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರು ಅಭಿನಂದನೆ ಸಲ್ಲಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯಕ್ ಅವರು ಮಾತನಾಡಿ ಮುಂಬರುವ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ 150+ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ ಸಲುವಾಗಿ ಬೂತು ಕಾರ್ಯಕರ್ತರಿಂದ ರಾಷ್ಟ್ರೀಯ ನಾಯಕರವರೆಗೆ ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಯಾಗಿಸಿದ್ದಾರೆ. ಕ್ಷೇತ್ರದ ಮನೆ ಸಂಪರ್ಕ ಮಾಡುವ ಮಹಾ ಸಂಪರ್ಕ ಅಭಿಯಾನ ಕಾರ್ಯಕ್ರಮ ಈ ಬಾರಿಯ ಚುನಾವಣೆಗೆ ಶಕ್ತಿ ನೀಡಲಿದ್ದು, ಮೇ. 10 ರಂದು ನಡೆಯುವ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ಗೆಲುವಿಗೆ ಪೂರಕವಾಗಲಿದೆ ಎಂದರು
ಮಹಾಸಂಪರ್ಕದ ದಿನ ಕಾರ್ಯಕರ್ತರು ಪ್ರತೀ ಮತಕಟ್ಟೆಗಳಲ್ಲಿ ಒಟ್ಟು ಸೇರಿ , ಸೂಕ್ತ ಯೋಜನೆಯೊಡನೆ ಮನೆ- ಮನೆ ಪ್ರಚಾರವನ್ನು ಹಮ್ಮಿಕೊಂಡಿದ್ದು
ಬಂಟ್ವಾಳ ಕ್ಷೇತ್ರದಲ್ಲಿ ಹಿರಿಯರು, ಮಹಿಳೆಯರು ಸೇರಿದಂತೆ ಸಾವಿರಾರು ಕಾರ್ಯಕರ್ತರು ಸಾಗರೋಪಾದಿಯಲ್ಲಿ ಬಿಜೆಪಿ ಶಾಲು ಹಾಕಿ ಮನೆ ಮನೆಗೆ ತೆರಳಿ ಸಂಪರ್ಕ ಅಭಿಯಾನದಲ್ಲಿ ಪಾಲ್ಗೊಂಡರು.
ಮಾಜಿ ಶಾಸಕರಾದ ಶ್ರೀ ಎ ರುಕ್ಮಯ ಪೂಜಾರಿ ಪದ್ಮನಾಭ ಕೊಟ್ಟಾರಿ ಮತ್ತು ಹರಿ ಕೃಷ್ಣಬಂಟ್ವಾಳ್ ಪಕ್ಷದ ಜವಾಬ್ದಾರಿ ಇರುವ ಎಲ್ಲಾ ಪ್ರಮುಖರು ತಮ್ಮ ತಮ್ಮ ಬೂತಿನಲ್ಲಿ ಮನೆ ಸಂಪರ್ಕದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದು ,ರಾಜ್ಯ , ಜಿಲ್ಲೆ , ಮಂಡಲದ , ಶಕ್ತಿ ಕೇಂದ್ರ , ಮಹಾಶಕ್ತಿ ಕೇಂದ್ರ ಹಾಗೂ ಬೂತು ಸಮಿತಿಯ ಎಲ್ಲಾ ಪ್ರಮುಖರು ಒಂದು ಮತಕಟ್ಟೆಯಲ್ಲಿ ಮನೆ ಮತಯಾಚನೆ ಅಭಿಯಾನದಲ್ಲಿ ತೊಡಗಿಸಿಕೊಂಡಿದ್ದಾರೆ.