ಹಾಸನ : ಬೆಂಕಿ ತಗುಲಿ ಮನೆ ಸಂಪೂರ್ಣ ನಾಶ

ಆಕಸ್ಮಿಕ ಬೆಂಕಿ ತಗುಲಿ ಮನೆಯೊಂದು ಸಂಪೂರ್ಣ ನಾಶವಾಗಿರುವ ಘಟನೆ ಹಾಸನ ತಾಲೂಕು ಕಾರ್ಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಕುಂದೂರು ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಹೇಮಾವತಿ ಎಂಬುವರಿಗೆ ಸೇರಿದ ಮನೆ ಬೆಂಕಿಗೆ ಸಂಪೂರ್ಣವಾಗಿ ಸುಟ್ಟುಹೋಗಿದ್ದು , ಕುಟುಂಬಸ್ಥರು ದಿಕ್ಕಿಲ್ಲದೆ ನರಳುವಂತಾಗಿದೆ. ಮನೆಯಲ್ಲಿ ವಾಸವಾಗಿದ್ದ ಹೇಮವತಿ ಮತ್ತು ಅವರ ಇಬ್ಬರು ಮಕ್ಕಳು ಭರತ್ ಮತ್ತು ಶ್ರಾವಣಿ . ಮನೆಯಲ್ಲಿದ್ದ ದವಸ ಧಾನ್ಯ ಬಟ್ಟೆ ಸಂಪೂರ್ಣ ನಾಶವಾಗಿದೆ.

ಘಟನೆ ನಡೆದ ಸ್ಥಳಕ್ಕೆ ಆಲೂರು ಸಕಲೇಶಪುರ ಕ್ಷೇತ್ರದ ನೂತನ ಶಾಸಕ ಸಿಮೆಂಟ್ ಮಂಜುನಾಥ್ ಅವರು ಭೇಟಿ ನೀಡಿದ್ದಾರೆ.

Related Posts

Leave a Reply

Your email address will not be published.