ದಕ್ಷಿಣಕನ್ನಡ ಜಿಲ್ಲಾದ್ಯಂತ ಮುಂದುವರಿದ ಮಳೆಯ ಆರ್ಭಟ

ದಕ್ಷಿಣಕನ್ನಡ ಜಿಲ್ಲಾದ್ಯಂತ ಮಳೆಯ ಆರ್ಭಟ ಮುಂದುವರಿದಿದ್ದು ನಗರದ ಕುಲಶೇಖರ ಕೋಟಿಮುರ ಸಿಲ್ವರ್ ಗೇಟ್‌ನ ಗ್ರಂಥಾಲಯದ ಬಳಿ ಇರುವ ನಾಗೇಶ್ ಎಂಬುವವರ ಮನೆ ಕುಸಿದು ಬಿದ್ದಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್ ರವರು ಕುಟುಂಬಸ್ಥರಿಗೆ ಧೈರ್ಯ ತುಂಬಿ ಪರಿಹಾರ ಕಾರ್ಯದ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕರೆ ಮಾಡಿ ಸೂಚಿಸಿದರು.

ಸ್ಥಳದಲ್ಲಿ ಅಜಯ್ ಕುಲಶೇಖರ, ನಿತಿನ್ ಕುಮಾರ್, ಅನಿಲ್, ಹರಿಣಿ ಪ್ರೇಮ್, ಪ್ರಶಾಂತ್, ಸುಶಾಂತ್ ಮೊದಲಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.