ಕರಾವಳಿ ಸಹಿತ 3 ಜಿಲ್ಲೆಗಳಲ್ಲಿ ಭಾರೀ ಮಳೆ:ರೆಡ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂಗಾರು ಮಳೆ ಹಲವೆಡೆ ವ್ಯಾಪಿಸಿ ಉತ್ತಮ ಮಳೆಯಾಗುತ್ತಿದ್ದು, ಕೆಲವು ಉತ್ತಮ ಮಳೆಯಾಗಿ ಜನಜೀವನ ವ್ಯಸ್ತಗೊಂಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರವೂ ಉತ್ತಮ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾನುವಾರ (ಜೂ.15) ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.



ಕರಾವಳಿ ಭಾಗದಲ್ಲಿ ಜೂ.15ರಂದು ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ “ರೆಡ್ ಅಲರ್ಟ್ ‘ ಘೋಷಿಸಿದೆ. ಈ ಅವಧಿಯಲ್ಲಿ ಈ ವೇಳೆ 204.5 ಮಿ.ಮೀ.ಗೂ ಅಧಿಕ ಮಳೆ ಸುರಿಯಲಿದ್ದು, ಗುಡುಗು, ಗಾಳಿ ಸಹಿತ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ. ಜೂ.16 ಮತ್ತು 17 ರಂದು ಆರೆಂಜ್ ಅಲರ್ಟ್ ಮತ್ತು ಜೂ.18 ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.