ಹೆಜಮಾಡಿ : ಪ್ರಜ್ಞಾಹೀನ ಸ್ಥಿತಿಯಲ್ಲಿ ಮಹಿಳೆ ಪತ್ತೆ

ಸುಮಾರು 35ವರ್ಷ ವಯಸ್ಸಿನ ಮಹಿಳೆಯೋರ್ವರು ಹೆಜಮಾಡಿ ಪೆಟ್ರೋಲ್ ಬಂಕ್ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸ್ಥಳೀಯರ ಮಾಹಿತಿಯಂತೆ ಹೆಜಮಾಡಿ ಗ್ರಾ.ಪಂ. ಅಧ್ಯಕ್ಷ ಪಾಂಡುರಂಗ ಕರ್ಕೇರ, ಸದಸ್ಯ ಪ್ರಾಣೇಶ್ ಹೆಜಮಾಡಿ ಸ್ಥಳಕ್ಕೆ ಬಂದು ಪರಿಶೀಲಿಸಿ ಪಡುಬಿದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾನಸಿಕ ಸೀಮಿತ ಕಳೆದು ಕೊಂಡಿರ ಬಹುದೇ ಇಲ್ಲ ನಶೆಯಿಂದ ಬಿದ್ದಿರ ಬಹುದೇ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಂದ ಪಡುಬಿದ್ರಿ ಪೊಲೀಸರು ಅಟೋ ರಿಕ್ಷಾದ ಮೂಲಕ ಮುಲ್ಕಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಕುಡಿತದ ಮತ್ತಿನಲ್ಲಿದ್ದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಿದ್ದು ಮಂಗಳಮುಖಿ ಎಂಬ ಸಂಶಯ ವ್ಯಕ್ತ ಪಡಿಸಿದ್ದಾರೆ ಪೊಲೀಸರು.
