ಶಾಸಕ ಹರೀಶ್ ಪೂಂಜಾರನ್ನು ಬಂಧಿಸದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಉಚ್ಚ ನ್ಯಾಯಾಲಯ
ಸುಳ್ಳು ಕೇಸ್ ದಾಖಲಿಸಿ ಉದ್ದೇಶಪೂರ್ವಕವಾಗಿ ದ.ಕ. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಬಂಧನ ನಡೆದಿದೆ. ಆತ ಅಮಾಯಕ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಶಾಸಕ ಹರೀಶ್ ಪೂಂಜಾ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ನಡೆದ ಘಟನೆಗಳ ಬಗ್ಗೆ ಅವರ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ ಮೊಕದ್ದಮೆ ವಿಚಾರವಾಗಿ ಜೂ೦೭ ರಂದು ಪ್ರಕರಣವನ್ನು ಕೈಗೆತ್ತಿಕೊಂಡ ಹೈಕೋರ್ಟ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರನ್ನು ಮುಂದಿನ ವಿಚಾರಣಾ ದಿನಾಂಕದವರೆಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ನೋಟಿಸ್ ನೀಡುವುದು, ಧ್ವನಿ ಮಾದರಿ ನೀಡಲು ಠಾಣೆಗೆ ಬರುವಂತೆ ಒತ್ತಾಯಿಸುವುದು ಮಾಡಬಾರದಾಗಿ ಕರ್ನಾಟಕದ ಉಚ್ಚ ನ್ಯಾಯಾಲಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಈ ಪ್ರಕರಣದಲ್ಲಿ ಹರೀಶ್ ಪೂಂಜಾ ಅವರ ಪರವಾಗಿ ವಕೀಲ ಪ್ರಭುಲಿಂಗ ನಾವಡಗಿ ,ಪ್ರಸನ್ನ ದೇಶಪಾಂಡೆ ಅವರು ವಾದವನ್ನು ಮಂಡಿಸಿದರು.