ಗೃಹರಕ್ಷಕ ದಳದ ಪಸ್ಚಿಮ ವಲಯ ಮಟ್ಟದ ಕ್ರೀಡಾಕೂಟ
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಸಮಾರೋಪ ಸಮಾರಂಭವು ಪಾಂಡೇಶ್ವರದ ಡಿಎಆರ್ ಪೆರೇಡ್ ಮೈದಾನ ಜರುಗಿತು.ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮುಖ್ಯ ಅಗ್ನಿಶಾಮಕ ಅಧಿಕಾರಿಗಳಾದ ತಿರುಮಲೇಶ್ ಬಿ.ಎಂ., ಕ್ರೀಡಾಪಟುಗಳು ಬಹಳ ಆಸಕ್ತಿಯಿಂದ ಭಾಗವಹಿಸಿರುತ್ತಾರೆ.
ಕ್ರೀಡೆಯಿಂದ ದೇಹ ಮತ್ತು ಮನಸ್ಸಿನ ನೆಮ್ಮದಿ ಮತ್ತು ಆರೋಗ್ಯಕ್ಕೆ ಒಳಿತು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಠರಾದ ಡಾ|| ಮುರಲೀ ಮೋಹನ್ ಚೂಂತಾರು ವಹಿಸಿದ್ದರು.
ವಿಜೇತ ಗೃಹರಕ್ಷಕ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು. ಗೋಪಿನಾಥ್ ಬಿ.ಎನ್, ಮಂಗಳೂರು ಘಟಕದ ಘಟಕಾಧಿಕಾರಿ ಸೀನಿಯರ್ ಪ್ಲಟೂನ್ ಕಮಾಂಡರ್ ಮಾರ್ಕ್‍ಶೇರಾ, ಬೆಳಗಾವಿ ಜಿಲ್ಲೆಯ ಬೋಧಕರಾದ ರಾಕೇಶ್ ಬಿ. ಗೋನಾಳ್ ಮೊದಲಾದವರು ಉಪಸ್ಥಿತರಿದ್ದರು.