ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ
ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ನಡೆಯಿತು. ನೂತನ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ, ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿ ಪುಷ್ಪರಾಜ ಶೆಟ್ಟಿ ನೇತೃತ್ವದ ತಂಡ ಅಧಿಕಾರ ವಹಿಸಿಕೊಂಡರು.
ನಿರ್ಗಮನ ಅಧ್ಯಕ್ಷ ದಯಾನಂದ ಕಲ್ನಾರ್, ಕಾರ್ಯದರ್ಶಿ ತೇಜೇಶ್ವರ ಕುಂದಲ್ಪಾಡಿ ಅಧಿಕಾರ ಹಸ್ತಾಂತರಿಸಿದರು. ದ.ಕ.ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಪದಗ್ರಹಣ ನೆರವೇರಿಸಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ,ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್, ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಹಾಗು ಸದಸ್ಯರಾದಗಂಗಾಧರ ಮಟ್ಟಿ, ಜೆ.ಕೆ.ರೈ, ಜಯಪ್ರಕಾಶ್ ಕುಕ್ಕೆಟ್ಟಿ, ಗಿರೀಶ್ ಪೆರುಮುಂಡ, ಪದ್ಮನಾಭ ಅರಂಬೂರು, ಮುರಳೀಧರ ಅಡ್ಡನಪಾರೆ, ಮಿಥುನ್ ಕರ್ಲಪ್ಪಾಡಿ ಶುಭ ಹಾರೈಸಿದರು.ನಿರ್ಗಮನ ಅಧ್ಯಕ್ಷ ದಯಾನಂದ ಕಲ್ನಾರ್ ಸ್ವಾಗತಿಸಿದರು. ನೂತನ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಮುಂದಿನ ಯೋಜನೆಗಳ ಕುರಿತು ವಿವರಿಸಿದರು. ಜಿಲ್ಲಾ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ ವಂದಿಸಿದರು.