ಅಮೃತ ವಿದ್ಯಾಲಯಂ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಪದಗ್ರಹಣ, ವಿವಿಧ ಸಂಘಗಳ ಉದ್ಘಾಟನೆ

ಮಂಗಳೂರಿನ ಅಮೃತ ವಿದ್ಯಾಲಯಂ ಶಾಲೆಯಲ್ಲಿ ನೂತನವಾಗಿ ರಚನೆಗೊಂಡ ವಿದ್ಯಾರ್ಥಿ ಮಂತ್ರಿ ಮಂಡಲದ ಪದಗ್ರಹಣ ಸಮಾರಂಭ ಮತ್ತು ವಿವಿಧ ಸಂಘಗಳ ಉದ್ಘಾಟನೆ ಕಾರ್ಯಕ್ರಮವು ನಡೆಯಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಲೆಫ್ಟಿನೆಂಟ್ ಕರ್ನಲ್ ವಿವೇಕ್ ಬಿಂದ್ರ, ಅಮೃತ ಕ್ಯಾಂಪಸ್ಸಿನ ನಿರ್ದೇಶಕರಾದ ಶ್ರೀಯುತ ಯತೀಶ್ ಬೈಕಂಪಾಡಿ, ಶಾಲಾ ಪ್ರಾಂಶುಪಾಲೆ ಶ್ರೀಮತಿ ಅಕ್ಷತಾ ಆರ್ ಶೆಣೈ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

ನಂತರ ವಿದ್ಯಾರ್ಥಿ ಮಂತ್ರಿಮಂಡಲಕ್ಕೆ ಆಯ್ಕೆಯಾದಂತಹ ವಿದ್ಯಾರ್ಥಿಗಳು ತಮ್ಮ ಕರ್ತವ್ಯಗಳನ್ನು ನಿಷ್ಠೆಯಿಂದ ಮಾಡಿ, ಶಾಲಾ ಕೀರ್ತಿ ಪತಾಕೆಯನ್ನು ಗಗನ್ನೆತ್ತರಕ್ಕೆ ಹಾರಿಸುವುದಾಗಿ ಪ್ರತಿಜ್ಞೆ ಮಾಡಿದರು. ಕವನ, ರಸಪ್ರಶ್ನೆ ಗಳ ಮೂಲಕ ವಿವಿಧ ಸಂಘಗಳಾದ ಉನ್ನತಿ, ಪ್ರಕೃತಿ, ಗಣಿತ್ ಸಂಘಗಳು ತಮ್ಮ ತಮ್ಮ ಸಂಘಗಳ ಧ್ಯೇಯ ಉದ್ದೇಶಗಳನ್ನು ಪ್ರಸ್ತುತಪಡಿಸಿದರು. ಮುಖ್ಯ ಅತಿಥಿಗಳು ಶಾಲೆ ಎಂಬುದು ಕೇವಲ ಶಿಕ್ಷಣವನ್ನು ನೀಡುವಂತಹ ಸಂಸ್ಥೆಯಾಗದೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ನೆರವಾಗುವಂತಹದ್ದು ಆಗಿರಬೇಕೆಂದು ಎಂದು ಹೇಳಿದರು. ವಿದ್ಯಾರ್ಥಿಗಳಿಗೆ ದೇಶ, ಧೈರ್ಯ, ಸತ್ಯ, ಮೌಲ್ಯ ಎಂಬ ಗುರು ಮಂತ್ರವನ್ನು ಬೋಧಿಸಿ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.


ಈ ಕಾರ್ಯಕ್ರಮದ ನಿರೂಪಣೆಯನ್ನು ಶಾಲಾ ವಿದ್ಯಾರ್ಥಿನಿ ಕುಮಾರಿ ಪ್ರಜ್ಞ ನೆರವೇರಿಸಿದರು. ಶಾಲಾ ನಾಯಕ ಜಿಶಿತ್, ನಾಯಕಿ ಅಮೃತ ಪ್ರಿಯ, ಶಾಲಾ ಶಿಕ್ಷಕ – ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

add - tandoor .

Related Posts

Leave a Reply

Your email address will not be published.