ಕುಪ್ಪೆಪದವು : ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಪ್ರಚಾರ

ಮಂಗಳೂರು: ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇನಾಯತ್ ಅಲಿ ಅವರು ಬಿರುಸಿನ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಇಂದು ಕುಪ್ಪೆಪದವಿನ ಕಾಂಗ್ರೆಸ್ ಕಾರ್ಯಕರ್ತರೊಬ್ಬರ ನಿವಾಸದಲ್ಲಿ ಸಭೆ ನಡೆಸಿದರು. ರಾಜ್ಯದಲ್ಲಿ ಹೊಸ ಬದಲಾವಣೆಗೆ ಕಾಂಗ್ರೆಸ್ ಗ್ಯಾರಂಟಿಗಳು ನಾಂದಿ ಹಾಡಲಿದ್ದು, ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆ ಮತ ನೀಡುವಂತೆ ಜನರನ್ನು ಕೋರಿದರು.