Indira Gandhi Birth Anniversary : ಇಂದುಇಂದಿರಾ ಗಾಂಧಿಯವರ 105ನೇ ಜನ್ಮದಿನ.
ಇಂದು ಭಾರತದ ಮೊದಲ ಮತ್ತು ಏಕೈಕ ಮಹಿಳಾ ಪ್ರಧಾನಿ ಇಂದಿರಾ ಗಾಂಧಿಯವರ 105ನೇ ಜನ್ಮದಿನ. ಇಂದಿರಾ ಗಾಂಧಿಯವರು 1917ರಲ್ಲಿ ನವೆಂಬರ್ 19ರಂದು ಅಲಹಾಬಾದ್ನಲ್ಲಿ ಜನಿಸಿದರು. ಇಂದಿರಾ ಗಾಂಧಿ (Indira Gandhi) ಅವರು ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಮಗಳು. ಅವರ ತಾಯಿ ಕಮಲಾ ನೆಹರು ಸ್ವಾತಂತ್ರ್ಯ ಹೋರಾಟಗಾರ್ತಿ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ನಾಯಕಿಯಾಗಿದ್ದರು. ಇಂದಿರಾ ಗಾಂಧಿಯವರು ತಮ್ಮ ತಂದೆ ಜವಾಹರಲಾಲ್ ನೆಹರು (Jawaharlal Nehru) ನಂತರ ಭಾರತದ ಎರಡನೇ ಅತಿ ಹೆಚ್ಚು ಅವಧಿಯ ಪ್ರಧಾನ ಮಂತ್ರಿಯಾಗಿದ್ದ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 1984ರ ಅಕ್ಟೋಬರ್ 31ರಂದು ಇಂದಿರಾ ಗಾಂಧಿ ಅವರ ಮನೆಯ ಇಬ್ಬರು ಭದ್ರತಾ ಸಿಬ್ಬಂದಿ ಆಕೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು.