ಉಳ್ಳಾಲ: ಇರಾ ಯುವಕ ಮಂಡಲ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ
ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಸುವರ್ಣ ಮಹೋತ್ಸವ ಸಮಿತಿಯ ಯುವಕ ಮಂಡಲ ಇರಾ ವತಿಯಿಂದ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಹಾಗೂ ಅಂಧರ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಇರಾದ ಬಾವಬೀಡು ಗೋಪಿ ಎಸ್. ಭಂಡಾರಿ ಗ್ರಾಮೀಣ ಆರೋಗ್ಯ ಮತ್ತು ತರಬೇತಿ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಶಿಬಿರವನ್ನು ನಿಟ್ಟೆ ಯುನಿವರ್ಸಿಟಿಯ ಡೀನ್ ಡಾ. ಸತೀಶ್ ಕುಮಾರ್ ಭಂಡಾರಿ ಅವರು ಶಿಬಿರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಿಬಿರದಲ್ಲಿ ಕಣ್ಣು, ಕಿವಿ, ಮೂಗು, ಗಂಟಲು, ಚರ್ಮ, ಸಾಮಾನ್ಯ ಶಸ್ತ್ರಚಿಕಿತ್ಸೆ, ಮಧುಮೇಹ, ರಕ್ತದೊತ್ತಡ ಹಾಗೂ ಇತರ ಸಾಮಾನ್ಯ ಕಾಯಿಲೆಗಳ ಬಗ್ಗೆ ನುರಿತ ವೈದ್ಯರು ತಪಾಸಣೆ ನಡೆಸಿದರು.
ಉಚಿತ ತಪಾಸಣಾ ಶಿಬಿರವನ್ನು ಪ್ರಯೋಜನವನ್ನು ಅನೇಕ ಮಂದಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಯುವಕ ಮಂಡಲ ಇರಾದ ಸುವರ್ಣ ಮಹೋತ್ಸವ ಮತ್ತು ಕಾರ್ಯಕಾರಿ ಸಮಿತಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.