ಗ್ಯಾರಂಟಿ ಕಾರ್ಡ್ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ : ಐವನ್ ಡಿಸೋಜಾ ಕಿಡಿ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಕಾರ್ಡ್ ಬಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕಿಡಿಕಾರಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸಚಿವ ಸಂಪುಟದಲ್ಲಿ ಅನುಮೋದನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆದು, ಫಲಾನುಭವಿಗಳಿಗೆ ಯೋಜನೆಗಳು ಸಿಗಲಿದೆ ಎಂದರು. ಗ್ಯಾರಂಟಿ ಕಾರ್ಡ್ ವಿಚಾರದಲ್ಲಿ ಜನರು ಯಾವುದೇ ಗೊಂದಲ ಪಡುವ ಅಗತ್ಯವಿಲ್ಲ. ಗೊಂದಲ ಇರೋದು ಬಿಜೆಪಿಯರಿಗೆ ಮಾತ್ರ. ಈಗಾಗಲೇ ರಾಜ್ಯದ ಬೊಕ್ಕಸವನ್ನು ಬಿಜೆಪಿ ಸರ್ಕಾರ ಖಾಲಿ ಮಾಡಿದ್ದರೂ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿವಿಧ ಮೂಲಗಳಿಂದ ಅನುದಾನವನ್ನು ಕ್ರೋಢೀಕರಿಸಿ ಎಲ್ಲಾ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ವೇಳೆ ಪಕ್ಷದ ಮುಖಂಡರಾದ ಶಶಿಧರ್ ಹೆಗ್ಡೆ, ಆಶ್ರಫ್, ನವೀನ್ ಡಿಸೋಜಾ, ಸುಧೀರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.