ಮಂಗಳೂರು: ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ, ಮಹಿಳೆಗೆ ಗಂಭೀರ ಗಾಯ
ಮಂಗಳೂರಿನ ಅತ್ತಾವರದ ಐವರಿ ಟವರ್‌ನಲ್ಲಿ ಶಾರ್ಟ್ ಸರ್ಕೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯಲ್ಲಿ ಹಲವು ಮಂದಿಯಿದ್ದು, ಘಟನೆ ಸಂಭವಿಸಿದ ತಕ್ಷಣ ಹೊರಗೆ ಬಂದು ಅಪಾಯದಿಂದ ಪಾರಾಗಿದ್ದಾರೆ. ಆದರೆ ಮಹಿಳೆಯೊಬ್ಬರು ಬಾತ್ ರೂಮ್‌ನಲ್ಲಿದ್ದ ಕಾರಣ ಹೊರಗೆ ಬರಲಾಗದೆ ಸಿಲುಕಿದ್ದರಿಂದ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ಹೇಳಲಾಗಿದೆ.
ಬೆಂಕಿ ಅನಾಹುತದಿಂದ ಮನೆಯೊಳಗಿನ ಪೀಠೋಪಕರಣಗಳು ಸುಟ್ಟು ಕರಕಲಾಗಿವೆ ಎಂದು ಪಾಂಡೇಶ್ಚರ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ