ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಬಿಜೆಪಿಯ ಮೂರು ದಶಕಗಳ ನಂಟನ್ನು ಕಡಿದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಕೈ ಪಾಳಯದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸೋಮವಾರ ಬೆಳಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಿರಿಯ ಮುಖಂಡರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಜಗದೀಶ್ ಶೆಟ್ಟರ್ ಅವರು ತಾನು ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶೆಟ್ಟರ್ ಅವರಿಗೆ ಬಿ ಫಾರಂ ವಿತರಿಸಿದರು.