ಉಚಿತ ಆರೋಗ್ಯ ಯೋಗಕ್ಷೇಮ ಕಾರ್ಯಕ್ರಮ, ಉಚಿತ ದಂತ ಚಿಕಿತ್ಸಾ ಹಾಗೂ ಮಾಹಿತಿ ಶಿಬಿರ

ಜಗದ್ಗುರು ಶ್ರೀ ನಿತ್ಯಾನಂದ ಮಹಾಪೀಠಮ್ ಚಾರಿಟೇಬಲ್ ಟ್ರಸ್ಟ್ , ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠ ಉಪ್ಪಳ, ಜುಲೇಖಾ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಒಂಕಾಲಜಿ, ಸಮುದಾಯ ದಂತ ವಿಭಾಗ ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಯೆನೆಪೋಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ಸಹಯೋಗದಲ್ಲಿ ಕೊಂಡೆವೂರು ಮಠದ ವಿಂಶತಿ ಕಾರ್ಯಕ್ರಮದ ಅಂಗವಾಗಿ ಮಹಿಳೆಯರ ಉಚಿತ ಆರೋಗ್ಯ ಯೋಗಕ್ಷೇಮ ಕಾರ್ಯಕ್ರಮ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ ಹಾಗೂ ಮಾಹಿತಿ ಶಿಬಿರವು ಜುಲೈ 16 ರಂದು ಉಪ್ಪಳ ಕೊಂಡೆವೂರು ಮಠದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ನಡೆಯಲಿದೆ.
ಈ ಶಿಬಿರವು ಜುಲೈ 16 ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೊಂಡೆವೂರಿನ ಪರಮಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಜಗದ್ಗುರು ಶ್ರೀ ನಿತ್ಯಾನಂದ ಮಹಾಪೀಠಮ್ ಚಾರಿಟೇಬಲ್ಟ್ರ ಸ್ಟ್‌ನ ವಿಶ್ವಸ್ಥರು ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಮೋನಪ್ಪ ಭಂಡಾರಿ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ . ಕಾರ್ಯಕ್ರಮದ ಉದ್ಘಾಟನೆಯನ್ನು ಜಗದ್ಗುರು ಶ್ರೀ ನಿತ್ಯಾನಂದ ಮಹಾಪೀಠಮ್ ಚಾರಿಟೇಬಲ್ ಟ್ರಸ್ಟ್‌ನ ವಿಶ್ವಸ್ಥರಾಗಿರುವ ಸದಾಶಿವ ಶೆಟ್ಟಿ ಕುಳೂರು ಕನ್ಯಾನ ಅವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಗದ್ಗುರು ಶ್ರೀ ನಿತ್ಯಾನಂದ ಮಹಾಪೀಠಮ್ ಚಾರಿಟೇಬಲ್ ಟ್ರಸ್ಟ್‌ನ ವಿಶ್ವಸ್ಥರಾದ ಶಶಿಧರ ಶೆಟ್ಟಿ ಗ್ರಾಮಚಾವಡಿ, ವೈದ್ಯಕೀಯ ಒಂಕಾಲಜಿ ವಿಭಾಗದ ಮುಖ್ಯಸ್ಥರಾದ ಡಾ.ರಾಜೇಶ್ ಕೃಷ್ಣ, ಒಂಕಾಲಜಿ ಶಿಶು ರಕ್ತ ವಿಜ್ಞಾನದ ಸಹಾಯಕ ಪ್ರಾಧ್ಯಾಪಕರಾದ ಡಾ. ಅನುಷಾ ಹೆಗ್ಡೆ ಭಾಗವಹಿಸಲಿದ್ದಾರೆ.

ಮಹಿಳಾ ಸ್ವಾಸ್ಥ್ಯ ಶಿಬಿರ, ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಆಸ್ಪತ್ರೆಯಲ್ಲಿ ದೊರಕುಮ ಸಮಗ್ರ ಕ್ಯಾನ್ಸರ್ ಸೌಲಭ್ಯಗಳು ಅಂದಿನ ಶಿಬಿರದಲ್ಲಿ ಲಭ್ಯವಿರುವ ಸೇವೆಗಳಾಗಿದೆ.
ಬೆಳಿಗ್ಗೆ 8.30 ರಿಂದ ಶಿಬಿರದಲ್ಲಿ ಭಾಗವಹಿಸುವವರ ನೋಂದಣಿ ಆರಂಭಗೊಳ್ಳಲಿದ್ದು ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದು ಯಶಸ್ವಿಗೊಳಿಸುವಂತೆ ಕೊಂಡೆವೂರು ಮಠದ ಜಗದ್ಗುರು ಶ್ರೀ ನಿತ್ಯಾನಂದ ಮಹಾಪೀಠಮ್ ಚಾರಿಟೇಬಲ್ ಟ್ರಸ್ಟಿನ ಆಡಳಿತ ಮಂಡಳಿಯವರು ವಿನಂತಿಸಿಕೊಂಡಿದ್ದಾರೆ.