ಶಾಸಕ ಸ್ಥಾನಕ್ಕೆ ಜಗದೀಶ ಶೆಟ್ಟರ್ ರಾಜೀನಾಮೆ

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ತೀವ್ರ ನೊಂದಿದ್ದ ಮಾಜಿ ಮುಖ್ಯಮಂತ್ರಿ, ಹಿರಿಯ ನಾಯಕ ಜಗದೀಶ್ ಶೆಟ್ಟರ್ ಭಾನುವಾರ ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಜೊತೆಗೆ ಬಿಜೆಪಿಯ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ಕೂಡ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಮೂಲಕ ತಮ್ಮ ಮೂರು ದಶಕಗಳ ಬಿಜೆಪಿಯೊಂದಿಗಿನ ಸಂಬಂಧಕ್ಕೆ ಜಗದೀಶ್ ಶೆಟ್ಟರ್ ವಿದಾಯ ಹಾಡಿದ್ದಾರೆ. ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಹೋಗಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ