ಜೈಲರ್’ ಸಿನಿಮಾದ ಚಿತ್ರೀಕರಣಕ್ಕಾಗಿ ಮಂಗಳೂರಿಗೆ ಆಗಮಿಸಿದ ಸೂಪರ್ ಸ್ಟಾರ್’ ರಜನಿಕಾಂತ್

ತಮಿಳು ಚಿತ್ರರಂಗದ ‘ಸೂಪರ್ ಸ್ಟಾರ್’ ರಜನಿಕಾಂತ್ ಭಾನುವಾರ ರಾತ್ರಿ ಕರಾವಳಿ ನಗರ ಮಂಗಳೂರಿಗೆ ಆಗಮಿಸಿದ್ದಾರೆ.
ರಾತ್ರಿ 9ರ ಸುಮಾರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಅಲ್ಲಿಂದ ಅಭಿಮಾನಿಗಳಿಗೆ ಕೈಬೀಸುತ್ತಾ ಖಾಸಗಿ ಕಾರಿನಲ್ಲಿ ತೆರಳಿದ್ದಾರೆ.
‘ಜೈಲರ್’ ಸಿನಿಮಾದ ಚಿತ್ರೀಕರಣಕ್ಕಾಗಿ ಅವರು ಮಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗಿದೆ. ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿರುವ ಗುತ್ತಿನ ಮನೆಯಲ್ಲಿ ಶೂಟಿಂಗ್ ನಡೆಯಲಿದ್ದು, ಎರಡು ದಿನ ಕರಾವಳಿಯಲ್ಲಿ ತಂಗಲಿದ್ದಾರೆ.

ಜೈಲರ್’ ಸಿನಿಮಾದಲ್ಲಿ ಸ್ಯಾಂಡಲ್‌ವುಡ್ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡಾ ನಟಿಸಲಿದ್ದು, ಅವರೂ ಚಿತ್ರ ತಂಡವನ್ನು ಸೇರಿಕೊಂಡಿದ್ದಾರೆ. ಶೂಟಿಂಗ್ ಇರುವುದರಿಂದ ಸ್ಥಳದಲ್ಲಿ ಯಾರಿಗೂ ಭೇಟಿಗೆ ಅವಕಾಶ ನೀಡಿಲ್ಲ.
