ಕಾಪು ಶ್ರೀ ಮಾರಿಗುಡಿ ದೇವಸ್ಥಾನಕ್ಕೆ ಕೆ.ರಘುಪತಿ ಭಟ್ ಭೇಟಿ

ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಪ್ರಯುಕ್ತ ನವದುರ್ಗಾ ಲೇಖನ ಯಜ್ಞ ಆಯೋಜಿಲಾಗಿದ್ದು, ಈ ಲೇಖನವನ್ನು ಬರೆಯುವ ಕಾರ್ಯಕ್ರಮವನ್ನು ಯಶಸ್ವಿಗೊಳ್ಳಿಸುವ ನಿಟ್ಟಿನಲ್ಲಿ ಎಸ್ ಅರ್ ಗ್ರೂಪ್ ಆಫ್ ಎಜುಕೇಶನಲ್ ಇನ್ಸ್ಟಿಟ್ಯೂಟ್ ವಿದ್ಯಾಸಂಸ್ಥೆಗೆ ಉಡುಪಿಯ ನಿಕಟಪೂರ್ವ ಶಾಸಕರು, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷರಾದ ಕೆ ರಘುಪತಿ ಭಟ್ ಅವರು ಭೇಟಿ ಮಾಡಿ ನವದುರ್ಗಾ ಲೇಖನ ಯಜ್ಞದ ಕುರಿತು ಸಂಪೂರ್ಣವಾದ ವಿವರಣೆ ನೀಡಿ ಈ ಯಜ್ಞದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು .

ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಧ್ಯಕ್ಷರಾದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಯೋಗಿಶ್ ವಿ ಶೆಟ್ಟಿ ಬಾಲಾಜಿ , ಎಸ್ ಅರ್ ಗ್ರೂಪ್ ಆಫ್ ಎಜುಕೇಶನಲ್ ಇನ್ಸ್ಟಿಟ್ಯೂಟ್ ಮುಖ್ಯಸ್ಥರಾದ ಎಚ್ ನಾಗರಾಜ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.