ಲಾಡ್ಜ್‌ನಲ್ಲಿಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ನಗರದ ಕೆಎಸ್ ರಾವ್ ರೋಡ್ ಬಳಿ ಇರುವ ಲಾಡ್ಜ್‌ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ.ಮೈಸೂರು ಮೂಲದ ವಾಣಿ ವಿಲಾಸ ಬಡಾವಣೆಯ ದೇವೇಂದ್ರ (48) , ಪತ್ನಿ ಮತ್ತು ಇಬ್ಬರು ಹೆಣ್ಣಕ್ಕಳು ಆತ್ಮಹತ್ಯೆ ಮಾಡಿಕೊಂಡರು. ಮಾರ್ಚ್ 27ಕ್ಕೆ ಮಂಗಳೂರಿನ ಹೊಟೇಲ್ ನಲ್ಲಿ ರೂಮ್ ಪಡೆದುಕೊಂಡಿದ್ದರು. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಬಂದರು ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ.