ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಪೊಲೀಸರಿಂದ ಕಿರುಕುಳ : ಕಬೀರ್ ಉಳ್ಳಾಲ್ ಆರೋಪ

ಮಂಗಳೂರು ಪೊಲೀಸ್ ಕಮೀಷನರ್, ಉಳ್ಳಾಲ ಪೊಲೀಸರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಪೊಲೀಸರು ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಕಬೀರ್ ಉಳ್ಳಾಲ್ ಆರೋಪಿಸಿದ್ದಾರೆ. ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಮೂರು ಪ್ರಕರಣಗಳ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಪ್ರಕರಣಗಳ ಬಗ್ಗೆ ಮಂಗಳೂರು ಪೊಲೀಸ್ ಕಮೀಷನರ್ ಹಾಗೂ ಉಳ್ಳಾಲ ಪೊಲೀಸ್ ಇನ್ ಸ್ಪೆಕ್ಟರ್ ವಿರುದ್ಧ ಈಗಾಗಲೇ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ದೂರು ನೀಡಿದ ಬಳಿಕ ಪೊಲೀಸರಿಂದ ನನಗೆ ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪದಾಧಿಕಾರಿಗಳಾದ ಅಲೆಗ್ಸಾಂಡರ್, ದಯಾನಂದ, ಪ್ರೇಮಾ ಕೊಟ್ಟಾರಿ, ಇಮ್ತಿಯಾಝ್ ಉಪಸ್ಥಿತರಿದ್ದರು.
