ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವು

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30 ರಂದು ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ.ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಸಾವನ್ನೊಪ್ಪಿದವರು. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.ಮಾ.30 ರಂದು ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು.ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದರೂ ಫಲ ನೀಡಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಹೃದಯಾಘಾತಕ್ಕೆ ಒಳಗಾಗಿರಬಹುದೆಂದು ಅಂದಾಜಿಸಲಾಗಿದೆ,

Related Posts

Leave a Reply

Your email address will not be published.