ಕಡಬ : ಲೈನ್ ಮ್ಯಾನ್ ಮೃತಪಟ್ಟ ಪ್ರಕರಣ: ಮೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು
ಕಡಬ: ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೆಸ್ಕಾಂ ಅಧಿಕಾರಿಗಳ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಸಮೀಪದ ಮುಳಿಮಜಲು ಎಂಬಲ್ಲಿ ಬಾಗಲಕೋಟೆ ಮೂಲದ ದ್ಯಾವಣ್ಣ ದೊಡ್ಡಮನಿ ಎಂಬವರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟಿದ್ದರು.
ಮೃತ ಲೈನ್ ಮ್ಯಾನ್ ಜೊತೆ ಹಿರಿಯ ಅಧಿಕಾರಿಗಳಾಗಲಿ ಅಥವಾ ಸಹಾಯಕ್ಕೆ ಯಾರನ್ನೂ ಕಳುಹಿಸದೇ ಹಾಗೂ ಹೆಲ್ಮೆಟ್ ಹ್ಯಾಂಡ್ ಗ್ಲೌಸ್, ಶೂ ಸೇರಿದಂತೆ ಯಾವುದೇ ಮುಂಜಾಗ್ರತಾ ಸಾಮಾಗ್ರಿಗಳನ್ನು ನೀಡದೆ ವಿದ್ಯುತ್ ದುರಸ್ಥಿಗೆ ನಿರ್ಲಕ್ಷ್ಯತನದಿಂದ ವಿದ್ಯುತ್ ಕಂಬ ಹತ್ತಲು ಹೇಳಿ ಮಗನ ಸಾವಿಗೆ ಕಾರಣರಾಗಿದ್ದಾರೆ ಎಂದು ಮೃತರ ತಂದೆ ರೇವಣಪ್ಪ ದೊಡಮನಿ ಎಂಬವರು ಮೆಸ್ಕಾಂ ಕಡಬದ ಸಹಾಯಕ ಇಂಜಿನಿಯರ್ ಆದ ಸತ್ಯನಾರಾಯಣ ಸಿ.ಕೆ. ಮತ್ತು ಕಿರಿಯ ಇಂಜಿನಿಯರ್ ವಸಂತ ರವರ ವಿರುದ್ಧ ಕಡಬ ಠಾಣೆಗೆ ದೂರು ನೀಡಿದ್ದಾರೆ.