ಕಡಬ : ಅನಾರೋಗ್ಯದಿಂದ ಯುವಕ ನಿಧನ
ಕಡಬ: ಕುಟ್ರುಪ್ಪಾಡಿ ಗ್ರಾಮದ ಹೊಸಮಠ ಉಳಿಪು ನಿವಾಸಿ ಗಿರಿಯಪ್ಪ ಗೌಡ ಅವರ ಪುತ್ರ ಸುಮಂತ್(32ವ.)ರವರು ಅನಾರೋಗ್ಯದಿಂದ ಜೂ.22ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸುಮಂತ್ ಅವರು ಕಳೆದ ಎರಡು ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಕೆಲ ದಿನಗಳಿಂದ ಅವರ ಆರೋಗ್ಯದಲ್ಲಿ ಮತ್ತಷ್ಟೂ ಏರುಪೇರಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದವರು ಚಿಕಿತ್ಸೆಗೆ ಸ್ಪಂದಿಸದೆ ಜೂ.22ರಂದು ರಾತ್ರಿ ನಿಧನರಾಗಿದ್ದಾರೆ. ಮೃತರು ತಂದೆ ಗಿರಿಯಪ್ಪ ಗೌಡ, ತಾಯಿ ಇಂದಿರಾ, ಪತ್ನಿ, ಇಬ್ಬರು ಪುತ್ರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಸುಮಂತ್ ಅವರು ಕಳೆದ ನಾಲ್ಕೈದು ವರ್ಷಗಳಿಂದ ಗುಂಡ್ಯ ಪರಶುರಾಮ ಕ್ರೇನ್‌ನಲ್ಲಿ ಕೆಲಸ ಮಾಡುತ್ತಿದ್ದರು.