ಕಡಬ: ಲೋಕಾಯುಕ್ತ ಜನಸಂಪರ್ಕ ಸಭೆ

ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಅಧಿಕಾರಿಗಳಿಂದ ಕಡಬ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಲೋಕಾಯುಕ್ತ ಮಂಗಳೂರು ವಿಭಾಗದ ಎಸ್‍ಪಿ ಸೈಮನ್ ಮಾತನಾಡಿ ಕಡಬ ತಾಲೂಕಿನಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಹಾಗೂ ಸಾರ್ವಜನಿಕರಿಗೆ ಯಾವುದೇ ಅಧಿಕಾರಿಗಳು ಸರಿಯಾಗಿ ಸ್ಪಂದನೆ ನೀಡದೆ ಅಧಿಕಾರ ನಡೆಸದಿದ್ದರೆ. ಸರಕಾರಿ ಸವಲತ್ತುಗಳನ್ನು ದೊರಕಿಸಿಕೊಡುವಲ್ಲಿ ವಿನಕಾರಣ ತೊಂದರೆ ನೀಡಿದಲ್ಲಿ ಅಧಿಕಾರಿಗಳು ಸಾರ್ವಜನಿಕರಿಗೆ ಸರಕಾರಿ ಕೆಲಸದಲ್ಲಿ ತೊಂದರೆ ನೀಡಿದರೆ ಲೋಕಾಯುಕ್ತ ಕ್ಕೆ ದೂರು ನೀಡಬಹುದು ಅದು ವಿಚಾರಣೆಗೆ ಯೋಗ್ಯವಾಗಿದ್ದಲ್ಲಿ ವಿಚಾರಣೆಗೆ ಒಳಪಡಿಸಲಗುವುದು. ಅದೇ ರೀತಿ ಜನರು ಕೂಡಾ ಹೆಚ್ಚಿನ ಸ್ಪಂದನೆಕೊಡಬೇಕು ಎಂದರು.

ಸೀತಾರಾಮ ನಾೈಕ್ ಹಾಗೂ ವೆಂಕಟ್ರಾಜ್ ಕೋಡಿಬೈಲು ದೂರು ನೀಡಿ ಕಡಬದಲ್ಲಿ ಕೆರೆ ಒತ್ತುವರಿ ಮಾಡಿಕೊಂಡು ಸಾರ್ವಜನಿಕರಿಗೆ ದಾರಿ ಇಲ್ಲದಂತೆ ಮಾಡಲಾಗಿದೆ, ನಮಗೆ ನ್ಯಾಯ ಒದಗಿಸಬೇಕೆಂದು ವಿನಂತಿ ಮಾಡಿಕೊಂಡರು ಇದಕ್ಕೆ ಪ್ರತಿಕ್ರಿಯೆ ನೀಡಿದ ಲೋಕಾಯುಕ್ತ ಅಧಿಕಾರಿಗಳು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿ ತಕ್ಷಣ ಕೆರೆ ಒತ್ತುವರಿ ತೆರವು ಕಾರ್ಯ ಮಾಡಿ ರಸ್ತೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕೆಂದರು.

ಕುಟ್ರುಪ್ಪಾಡಿ ಗ್ರಾಮದ ಉಳಿಪ್ಪು ನಿವಾಸಿ ಶಿಬು ಎಂಬವರ ಪತ್ನಿ ಸೌಮ್ಯ ಅವರು ಅಕ್ರಮ ಸಕ್ರಮ ಕಡತ ವಿಲೇವಾರಿಯಲ್ಲಿ ಅಧಿಕಾರಿಗಳಿಂದ ಆಗಿರುವ ಅನ್ಯಾಯವನ್ನು ಹೇಳಿ ಗಳಗಳನೆ ಅತ್ತು ಕಣ್ಣೀರಿಟ್ಟ ಪ್ರಸಂಗ ಕೂಡಾ ನಡೆಯಿತು.

ಈ ಸಂದರ್ಭದಲ್ಲಿ ಲೋಕಾಯುಕ್ತ ಡಿವೈಎಸ್‍ಪಿ ಗಳಾದ ಗಾನಾ ಪಿ.ಕುಮಾರ್, ಚೆಲುವರಾಜ್, ಕಡಬ ತಹಸೀಲ್ದಾರ್ ಪ್ರಭಾಕರ ಖಜೂರೆ, ಉಪತಹಸೀಲ್ದಾರ್ ಗಳಾದ ಮನೋಹರ್ ಕೆ.ಟಿ, ಗೋಪಾಲ್ ಕಲ್ಲುಗುಡ್ಡೆ, ಕಡಬ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೀಲಾವತಿ, ಕಂದಾಯ ನಿರೀಕ್ಷಕ ಪೃಥ್ವಿರಾಜ್ ಹಾಗೂ ವಿವಿಧ ಇಲಾಖಾಧಿಕರಿಗಳು ಉಪಸ್ಥಿತರಿದ್ದರು.

ಕಡಬ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಲೋಕಾಯುಕ್ತ ಸಿಬ್ಬಂದಿಗಳಾದ ಸುರೇಂದ್ರ, ಪ್ರವೀಣ್, ಶರತ್ ದುಂಡಪ್ಪ, ನವೀನ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.