ಬೈಕ್ ಮತ್ತು ಬಸ್ ನಡುವೆ ಅಪಘಾತ: ಬೈಕ್ ಸವಾರ ಸಾವು
ಕಡಬ, ಬೈಕ್ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಸೋಮವಾರದಂದು ನಡೆದಿದೆ.
ಮೃತ ಬೈಕ್ ಸವಾರನನ್ನು ಕೊಂಬಾರು ಮಣಿಭಾಂಡ ತೇರೆಬೀದಿ ನಿವಾಸಿ ನೆಟ್ಟಣದಲ್ಲಿ ಮೆಕ್ಯಾನಿಕ್ ಆಗಿದ್ದ ವಾಸುದೇವ ಗೌಡ ಎಂದು ಗುರುತಿಸಲಾಗಿದೆ. ಕೆಎಸ್ಸಾರ್ಟಿಸಿ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಎದುರುನಿಂದ ಬಂದ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ವಾಸುದೇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ